ಐಬಿಪಿಎಸ್ ಪರೀಕ್ಷೆಯಲ್ಲಿ ಕನ್ನಡಿಗರಿಗೆ ಮೋಸ: ಕರ್ನಾಟಕದಲ್ಲಿರುವ ಉದ್ಯೋಗಗಳು ಹೊರ ರಾಜ್ಯದ ಪಾಲು

By Suvarna Web DeskFirst Published Oct 13, 2017, 8:08 AM IST
Highlights

ಕನ್ನಡಿಗರಿಗೆ ಗೋವಾದಲ್ಲಿ ಮಾತ್ರವಲ್ಲ, ಕರ್ನಾಟಕದಲ್ಲೇ  ಅನ್ಯಾಯವಾಗುತ್ತಿದೆ. ಬ್ಯಾಂಕಿಂಗ್​ ಉದ್ಯೋಗದಲ್ಲೂ ಕನ್ನಡಿಗರಿಗೆ  ದ್ರೋಹ ಬಗೆಯಲಾಗುತ್ತಿದೆ. 

ಬೆಂಗಳೂರು(ಅ.13): ರಾಷ್ಟ್ರೀಕೃತ ಹಾಗೂ ಗ್ರಾಮೀಣ ಬ್ಯಾಂಕ್ ಗಳು ತಿಂಗಳಿಗೊಮ್ಮೆ ನೇಮಕಾತಿ ಆದೇಶವನ್ನು ಹೊರಡಿಸುತ್ತೆ. ಈ ಸಂಬಂಧ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪರೀಕ್ಷೆ ಕೂಡಾ ನಡೆಯುತ್ತೆ. ಆದರೆ ಕನ್ನಡಿಗರಿಗೆ ಮಾತ್ರ ಉದ್ಯೋಗ  ನೀಡಲು ಹಿಂದೇಟು ಹಾಕಲಾಗುತ್ತಿದೆ. ಐಬಿಪಿಎಸ್ ನಡೆಸಿದ  ಪರೀಕ್ಷೆಯಲ್ಲಿ ರಾಜ್ಯದ ಅಭ್ಯರ್ಥಿಗಳನ್ನು ಪರಿಗಣಿಸಲಾಗುತ್ತಿಲ್ಲ. ಈ ಸಂಬಂಧ ಮೂರು ದಿನಗಳಿಂದ ಬೆಂಗಳೂರಿನ ಪ್ರೀಡಂ ಪಾರ್ಕ್ ನಲ್ಲಿ ಅನ್ಯಾಯಕ್ಕೆ ಒಳಗಾದ ಅಭ್ಯರ್ಥಿಗಳು ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ.

ತೆಲಂಗಾಣ, ಕೇರಳ ರಾಜ್ಯದಲ್ಲಿ ಮಾತೃ ಭಾಷಿಗರಿಕೆ 100% ರಷ್ಟು ಮಾನ್ಯತೆ

ಮುಂಬೈ ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನೆಲ್ ಸೆಲೆಕ್ಷನ್ ನಡೆಸಿದ ಪರೀಕ್ಷೆಯಲ್ಲಿ  ಹೊರ ರಾಜ್ಯದ ಶೇ 85ರಿಂದ 100ರಷ್ಟು  ಅಭ್ಯರ್ಥಿಗಳು ನೇಮಕಗೊಳ್ಳುತ್ತಾರೆ. ಆದರೆ, ನಮ್ಮ ರಾಜ್ಯದಲ್ಲಿ ಶೇ 20ರಷ್ಟು  ಅಭ್ಯರ್ಥಿಗಳನ್ನು ಮಾತ್ರ ಆಯ್ಕೆ ಮಾಡಿಕೊಳ್ಳುತ್ತಾರೆ.

ಐಬಿಪಿಎಸ್ ಬ್ಯಾಂಕಿಂಗ್  ಪರೀಕ್ಷೆಯಲ್ಲಿ  ಪ್ರಾದೇಶಿಕ ಹಾಗೂ ಸ್ಥಳೀಯ ಭಾಷಿಗರಿಗೆ ಮೊದಲ ಪ್ರಾಶಸ್ತ್ಯ ನೀಡಬೇಕೆಂಬ ನಿಯಮವಿದೆ. ಆದರೆ ಈ ನಿಯಮ ಪಾಲನೆ ಆಗುತ್ತಿಲ್ಲ ಕನ್ನಡಿಗರಿಗೆ ಆಗ್ತಿರುವ ಅನ್ಯಾಯದ ಬಗ್ಗೆ ರಾಜ್ಯ ಸರ್ಕಾರ ಮಧ್ಯ ಪ್ರವೇಶಿಸಿ ಕೇಂದ್ರ ಸರ್ಕಾರದ ಜತೆ ಮಾತುಕತೆ ಕೂಡಲೇ ಮುಂದಾಗಬೇಕಿದೆ.

 

click me!