
ನವದೆಹಲಿ(ಮೇ.14): ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ವಿರುದ್ಧ ಮಾಜಿ ಸಚಿವ ಕಪಿಲ್ ಮಿಶ್ರಾ ಆರೋಪಗಳ ಸುರಿಮಳೆ ಗೈದಿದ್ದಾರೆ. ಇವತ್ತು ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕಪಿಲ್ ಮಿಶ್ರಾ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸರ್ಕಾರದ ವಿರುದ್ಧ ದಾಖಲೆಗಳನ್ನು ಬಿಡುಗಡೆ ಮಾಡಿದ್ದಾರೆ.
ಅರವಿಂದ್ ಕೇಜ್ರಿವಾಲ್ ಅಕ್ರಮವಾಗಿ ಹಣ ವರ್ಗಾಯಿಸಿದ್ದಾರೆ. ನಕಲಿ ಕಂಪನಿಗಳು, ಹವಾಲಾ ದಂಧೆಕೋರರ ಜೊತೆ ಸಂಪರ್ಕ ಇದೆ. ಆಪ್ ಸಚಿವರ ವಿದೇಶ ಪ್ರವಾಸದ ವೇಳೆ ಅವ್ಯವಹಾರ ನಡೆದಿದೆ. ಚುನಾವಣಾ ಆಯೋಗಕ್ಕೆ 36 ಕೋಟಿ ಲೆಕ್ಕದ ಬಗ್ಗೆ ಮಾಹಿತಿ ನೀಡಿಲ್ಲ. ಚುನಾವಣಾ ಆಯೋಗ, ಐಟಿಗೆ ಸುಳ್ಳು ಪ್ರಮಾಣ ಪತ್ರ ಸಲ್ಲಿಸಿದ್ದಾರೆ. ಈ ಎಲ್ಲಾ ಅವ್ಯವಹಾರದ ಕುರಿತ ದಾಖಲೆಗಳ ನನ್ನ ಬಳಿ ಇದ್ದು ನಾಳೆ ಬೆಳಗ್ಗೆ ಸಿಬಿಐಗೆ ದಾಖಲೆಗಳನ್ನು ನೀಡುತ್ತೇನೆ ಅಂತ ಹೇಳಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಕಪಿಲ್ ಮಿಶ್ರಾ ಆರೋಪಗಳನ್ನು ತಳ್ಳಿ ಹಾಕಿದ್ದಾರೆ. ನಾನು ಯಾವುದೇ ಅಕ್ರಮವೆಸಗಿಲ್ಲ. ನನ್ನ ವಿರುದ್ಧದ ಮಾಡಲಾಗುತ್ತಿರುವ ಆರೋಪಗಳೆಲ್ಲ ಸುಳ್ಳು ಅಂತ ಹೇಳಿದ್ರು.
ಇನ್ನು ಸುದ್ಧಿಗೋಷ್ಠಿ ಬಳಿಕ ಎಎಪಿ ಮಾಜಿ ಸಚಿವ ಕಪಿಲ್ ಮಿಶ್ರಾ ಕುಸಿದು ಬಿದ್ದಿದ್ದಾರೆ. ಅಸ್ವಸ್ಥ ಕಪಿಲ್ ಮಿಶ್ರಾರನ್ನು ಌಂಬುಲೆನ್ಸ್ ಮೂಲಕ ಆಸ್ಪತ್ರೆಗೆ ರವಾನಿಸಲಾಗಿದೆ. ಕಳೆದ ನಾಲ್ಕೈದು ದಿನಗಳಿಂದ ಕಪಿಲ್ ಮಿಶ್ರಾ ದೆಹಲಿಯಲ್ಲಿ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.