2500 ಗ್ರಾಮಪಂಚಾಯತ್'ಗಳಿಗೆ ವೈಫೈ ಯೋಜನೆಗೆ ಸಿಎಂ ಚಾಲನೆ

Published : Nov 17, 2017, 10:23 AM ISTUpdated : Apr 11, 2018, 12:54 PM IST
2500 ಗ್ರಾಮಪಂಚಾಯತ್'ಗಳಿಗೆ ವೈಫೈ ಯೋಜನೆಗೆ ಸಿಎಂ ಚಾಲನೆ

ಸಾರಾಂಶ

ಬೆಂಗಳೂರು ಅರಮನೆ ಆವರಣದಲ್ಲಿ ಗುರುವಾರದಿಂದ ಮೂರು ದಿನಗಳ ಕಾಲ ನಡೆಯಲಿರುವ ‘ಬೆಂಗಳೂರು ಟೆಕ್ ಸಮಾವೇಶ-2017’ ಉದ್ಘಾಟನಾ ಸಮಾರಂಭದಲ್ಲಿ ವೈಫೈ ಸೌಲಭ್ಯ ನೀಡುವ ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಅವರು, ಪ್ರಸಕ್ತ ವರ್ಷ 2500 ಗ್ರಾಮ ಪಂಚಾಯತಿಗಳಿಗೆ ವೈಫೈ ಸೌಲಭ್ಯ ಕಲ್ಪಿಸಲು ಉದ್ದೇಶಿಸಲಾಗಿದೆ.

ಬೆಂಗಳೂರು(ನ.17): ಹಳ್ಳಿ ಹಾಗೂ ನಗರಗಳ ಡಿಜಿಟಲ್ ಅಂತರ ಕಡಿಮೆ ಮಾಡಲು ಪ್ರಸಕ್ತ ಸಾಲಿನಲ್ಲಿ ರಾಜ್ಯದ 2500 ಗ್ರಾಮ ಪಂಚಾಯಿತಿಗಳಿಗೆ ವೈಫೈ ವ್ಯವಸ್ಥೆ ಕಲ್ಪಿಸುವ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಚಾಲನೆ ನೀಡಿದ್ದಾರೆ.ನಗರ ಹಾಗೂ ಗ್ರಾಮೀಣ ಪ್ರದೇಶದ ನಡುವಿನ ಡಿಜಿಟಲ್ ಅಂತರವನ್ನು ಕಡಿಮೆ ಮಾಡಲು ರಾಜ್ಯದ 500 ಗ್ರಾಮ ಪಂಚಾಯಿತಿಗಳಿಗೆ ವೈಫೈ ವ್ಯವಸ್ಥೆ ಕಲ್ಪಿಸುವ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು.

ಬೆಂಗಳೂರು ಅರಮನೆ ಆವರಣದಲ್ಲಿ ಗುರುವಾರದಿಂದ ಮೂರು ದಿನಗಳ ಕಾಲ ನಡೆಯಲಿರುವ ‘ಬೆಂಗಳೂರು ಟೆಕ್ ಸಮಾವೇಶ-2017’ ಉದ್ಘಾಟನಾ ಸಮಾರಂಭದಲ್ಲಿ ವೈಫೈ ಸೌಲಭ್ಯ ನೀಡುವ ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಅವರು, ಪ್ರಸಕ್ತ ವರ್ಷ 2500 ಗ್ರಾಮ ಪಂಚಾಯತಿಗಳಿಗೆ ವೈಫೈ ಸೌಲಭ್ಯ ಕಲ್ಪಿಸಲು ಉದ್ದೇಶಿಸಲಾಗಿದೆ. ಆ ಪೈಕಿ 500 ಗ್ರಾಮ ಪಂಚಾಯತಿಗಳಿಗೆ ವೈಫೈ ಸಂಪರ್ಕ ಕಲ್ಪಿಸುವ ಯೋಜನೆಗೆ ಗುರುವಾರ ಚಾಲನೆ ನೀಡಲಾಗಿದೆ. ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಒಂದು ಕಿ.ಮೀ.ವ್ಯಾಪ್ತಿವರೆಗೆ ವೈಫೈ ಸೌಲಭ್ಯ ಸಿಗಲಿದೆ. ಗ್ರಾಮ ಪಂಚಾಯಿತಿಗಳಿಗೆ ವೈಫೈ ಸೌಲಭ್ಯ ಕಲ್ಪಿಸುವುದರಿಂದ ಡಿಜಿಟಲ್ ತಂತ್ರಜ್ಞಾನ ಅಸಮಾನತೆ ದೂರವಾಗಿ ನಗರ ಮತ್ತು ಪಟ್ಟಣಗಳ ಉದ್ಯಮಿಗಳನ್ನು ಸಂಪರ್ಕಿಸಲು ಅನುಕೂಲವಾಗುತ್ತದೆ. ಸರ್ಕಾರದ ಹಲವು ಕಾರ್ಯಕ್ರಮ, ಯೋಜನೆಗಳ ಬಗ್ಗೆ ತಿಳಿದುಕೊಳ್ಳಲು ಸಾಧ್ಯವಾಗಲಿದೆ ಎಂದರು.

ಸ್ವಾತಂತ್ರ್ಯ ಬಂದಾಗಿನಿಂದಲೂ ಬೆಂಗಳೂರು ಜ್ಞಾನ ಆಧಾರಿತ, ಕೈಗಾರಿಕೆ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿದೆ. ತಂತ್ರಜ್ಞಾನ, ಕೌಶಲ್ಯ ಹಾಗೂ ಮೂಲಭೂತ ಸೌಕರ್ಯ ವಿಷಯದಲ್ಲಿ ವಿಶ್ವದ ಅತ್ಯುತ್ತಮ 25 ನಗರಗಳಲ್ಲಿ ಬೆಂಗಳೂರು ಒಂದಾಗಿದೆ. ಈ ಸ್ಥಾನವನ್ನು ಉಳಿಸಿಕೊಂಡು ವಿಶ್ವದ ತಾಂತ್ರಿಕ ಕೇಂದ್ರ ಹಾಗೂ ಹೊಸ ಬಗೆಯ ಕೈಗಾರಿಕೆಗಳ ನಾಯಕತ್ವಕ್ಕೆ ಬೆಂಗಳೂರು ಹೆಸರಾಗಬೇಕು ಎಂಬುದು ತಮ್ಮ ಕನಸಾಗಿದೆ ಎಂದರು.

ಕೈಗಾರಿಕಾ ಸಚಿವ ದೇಶಪಾಂಡೆ ಮಾತನಾಡಿ, ಕರ್ನಾಟಕ ಐಟಿ, ಬಿಟಿ ಸೇರಿದಂತೆ ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿದೆ. ವಿಶ್ವದರ್ಜೆಯ ಅನೇಕ ಕಂಪನಿಗಳು ಇಲ್ಲಿ ಕಾರ್ಯನಿರ್ವಹಿಸುತ್ತಿವೆ. ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರಗಳನ್ನು ಬೆಂಗಳೂರಿನಲ್ಲಿ ಸ್ಥಾಪಿಸಿವೆ. ಇತ್ತೀಚೆಗೆ ಹೊಸ ಸ್ಟಾರ್ಟ್ ಅಪ್‌'ಗಳು ಉಳಿದೆಲ್ಲ ರಾಜ್ಯಗಳಿಗಿಂತ ಕರ್ನಾಟಕದಲ್ಲಿ ಹೆಚ್ಚು ಆರಂಭವಾಗಿವೆ. 2020ರ ವೇಳೆಗೆ 20 ಸಾವಿರ ತಂತ್ರಜ್ಞಾನ ಆಧಾರಿತ ಸ್ಟಾರ್ಟ್‌ಅಪ್‌'ಗಳು ಆರಂಭವಾಗುವ ನಿರೀಕ್ಷೆ ಇದೆ. ಇದಕ್ಕಾಗಿ ರಾಜ್ಯ ಸರ್ಕಾರ ಎರಡು ಸಾವಿರ ಕೋಟಿ ರು. ನಿಧಿ ಸ್ಥಾಪಿಸಿ ಬಂಡವಾಳ ಹೂಡಲಿದೆ ಎಂದರು. ಕಾರ್ಯಕ್ರಮದಲ್ಲಿ ಹಲವಾರು ಗಣ್ಯರು ಭಾಗವಹಿಸಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Bengaluru: ಲವ್ ಮಾಡು, ಇಲ್ಲಾಂದ್ರೆ ಸಾಯ್ತೀನಿ: ಪೊಲೀಸ್ ಇನ್ಸ್‌ಪೆಕ್ಟರ್‌ಗೆ ಕಿರುಕುಳ ಕೊಟ್ಟ ಖತರ್ನಾಕ್ ಲೇಡಿ
ಸರ್ಕಾರಿ ನೇಮಕಾತಿ ವಿಳಂಬ: ಮನನೊಂದು ಧಾರವಾಡ ರೈಲು ಹಳಿಗೆ ಸಿಲುಕಿ ಯುವತಿ ದಾರುಣ ಸಾವು!