ರಾಜಾಜಿನಗರದ ಮೆಟ್ರೋದಲ್ಲಿ ಹಿಂದಿ ನಾಮಫಲಕಕ್ಕೆ ಮಸಿ ಬಳಿಯಲು ಕನ್ನಡ ಕಾರ್ಯಕರ್ತರ ಯತ್ನ

By Suvarna Web DeskFirst Published Jul 20, 2017, 8:53 AM IST
Highlights

ರಾಜ್ಯದಲ್ಲಿ, ಅದರಲ್ಲೂ ಬೆಂಗಳೂರಿನಲ್ಲಿ ಒತ್ತಾಯಪೂರ್ವಕ ಹಿಂದಿ ಹೇರಿಕೆಯನ್ನು ವಿರೋಧಿಸಿ #ಹಿಂದಿಬೇಡ #HindiBeda ಎಂಬ ಆಂದೋಲನವೇ ಆರಂಭವಾಗಿದೆ. ಇದೂ ಸೇರಿದಂತೆ, ಇತ್ತೀಚೆಗೆ ಪ್ರತ್ಯೇಕ ಕನ್ನಡ ನಾಡ ಧ್ವಜ ಪ್ರಸ್ತಾವನೆಯ ವಿಚಾರವು ರಾಷ್ಟ್ರಾದ್ಯಂತ ಮಾಧ್ಯಮಗಳಲ್ಲಿ ಚರ್ಚೆಗೆ ಪ್ರಮುಖ ವಿಷಯವಾಗಿದೆ.

ಬೆಂಗಳೂರು(ಜುಲೈ 20): ಬೆಂಗಳೂರು ಮೇಟ್ರೋ ನಿಲ್ದಾಣಗಳಲ್ಲಿ ಹಿಂದಿ ಭಾಷೆ ಹೇರಿಕೆ ವಿರೋಧಿಸಿ ರಾಜಾಜಿನಗರದ ಮೆಟ್ರೋ ನಿಲ್ದಾಣದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಒತ್ತಾಯಪೂರ್ವಕವಾಗಿ ಬೆಂಗಳೂರು ಮೆಟ್ರೋದಲ್ಲಿ ಹಿಂದಿ ಹೇರಲು ಕೇಂದ್ರ ಸರ್ಕಾರ ಹೊರಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿ, ಮೆಟ್ರೋದ ಹಿಂದಿ ನಾಮಫಲಕಕ್ಕೆ ಮಸಿ ಬಳಿಯಲು ಯತ್ನಿಸಿದರು. ಈ ವೇಳೆ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆಯಿತು. ಈ ವೇಳೆ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಯ್ತು. ಕನ್ನಡ ಪ್ರಕಾಶ್ ನೇತೃತ್ವದಲ್ಲಿ ಕನ್ನಡ ಸಂಘಟನೆಯ ಕಾರ್ಯಕರ್ತರು ಮೆಟ್ರೋ ಮುಂಭಾಗ ಕುಳಿತು ತಮ್ಮ ಪ್ರತಿಭಟನೆ ಮುಂದುವರಿಸಿದರು.

click me!