ಕರವೇ ನಾರಾಯಣ ಗೌಡ ನೇತೃತ್ವದಲ್ಲಿ ರೈಲ್ವೆ ನಿಲ್ದಾಣಕ್ಕೆ ಮುತ್ತಿಗೆ

By Suvarna Web DeskFirst Published Jan 25, 2018, 7:17 AM IST
Highlights

ಇಂದು ನಾಡಿನಾದ್ಯಂತ ಮಹದಾಯಿ ಹೋರಾಟ ಆರಂಭವಾಗಿದ್ದು, ಕರವೇ ನಾರಾಯಣ ಗೌಡ ನೇತೃತ್ವದಲ್ಲಿ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣಕ್ಕೆ ಮುತ್ತಿಗೆ ಹಾಕಲಾಗಿದೆ.

ಬೆಂಗಳೂರು (ಜ.25): ಇಂದು ನಾಡಿನಾದ್ಯಂತ ಮಹದಾಯಿ ಹೋರಾಟ ಆರಂಭವಾಗಿದ್ದು, ಕರವೇ ನಾರಾಯಣ ಗೌಡ ನೇತೃತ್ವದಲ್ಲಿ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣಕ್ಕೆ ಮುತ್ತಿಗೆ ಹಾಕಲಾಗಿದೆ. ನಾರಾಯಣ ಗೌಡ ನೇತೃತ್ವದಲ್ಲಿ ತೀವ್ರ ಪ್ರತಿಭಟನೆ ನಡೆಸಲಾಗುತ್ತಿದೆ. ಈ ವೇಳೆ ಪೊಲೀಸರು ಹಾಗೂ ಕರವೇ ಕಾರ್ಯಕರ್ತರ ನಡುವೆ  ವಾಗ್ವಾದ ನಡೆದಿದೆ.

ಈ ವೇಳೆ ಮಾತನಾಡಿದ ಕರವೇ ಮುಖಂಡ ನಾರಾಯಣ ಗೌಡ ಅವರು ಮಹದಾಯಿ ವಿಚಾರದಲ್ಲಿ ಕೇಂದ್ರ ಸರ್ಕಾರ ತಕ್ಷಣ ಮಧ್ಯಸ್ಥಿಕೆ ವಹಿಸಬೇಕು ಎಂದು ಆಗ್ರಹಿಸಿದ್ದಾರೆ.  ಪ್ರಧಾನಿ ಈ ವಿಚಾರವಾಗಿ ಸ್ಪಂದಿಸಬೇಕು.  ಕುಡಿಯುವ ನೀರಿಗಾಗಿ ನಾವು ಹೋರಾಟ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ.

ಅಲ್ಲದೇ ಗೋವಾದಲ್ಲಿ ಬಿಜೆಪಿ ಸರ್ಕಾರ ಇರುವುದರಿಂದ  ಕೇಂದ್ರವು ಈ ವಿಚಾರದಲ್ಲಿ ಮಧ್ಯಪ್ರವೇಶಿಸಿ ಅನ್ಯಾಯ ಸರಿಪಡಿಸಬೇಕು. ಇಲ್ಲವಾದಲ್ಲಿ ಕಾನೂನು ಸುವ್ಯವಸ್ಥೆ ರಾಜ್ಯದಲ್ಲಿ ಹದಗೆಡುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

click me!