
ಬೆಂಗಳೂರು (ಆ.23): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ 'ಮತಾಧಿಕಾರ ಯಾತ್ರೆ'ಯಲ್ಲಿ ಭಾಗವಹಿಸಲು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕರ್ನಾಟಕದ ಹತ್ತು ಶಾಸಕರ ತಂಡದೊಂದಿಗೆ ಬಿಹಾರಕ್ಕೆ ವಿಶೇಷ ವಿಮಾನದಲ್ಲಿ ಪ್ರಯಾಣಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ಪರವಾಗಿ ರಾಷ್ಟ್ರಮಟ್ಟದ ಕಾರ್ಯಕ್ರಮಗಳಲ್ಲಿ ಕರ್ನಾಟಕದ ನಾಯಕರ ಪಾಲ್ಗೊಳ್ಳುವಿಕೆ ಹೆಚ್ಚಾಗಿದ್ದು, ಇದೀಗ ಡಿಕೆಶಿ ನೇತೃತ್ವದಲ್ಲಿ ಶಾಸಕರ ತಂಡ ಯಾತ್ರೆಯಲ್ಲಿ ಭಾಗವಹಿಸಲು ತೆರಳಿದೆ. ಇದು ಪಕ್ಷದ ರಾಷ್ಟ್ರೀಯ ಕಾರ್ಯಕ್ರಮಗಳಿಗೆ ಕರ್ನಾಟಕದ ಕೊಡುಗೆಯನ್ನು ಎತ್ತಿ ತೋರಿಸುವ ಕ್ರಮವಾಗಿದೆ. ಇನ್ನು ಮತಾಧಿಕಾರ ಯಾತ್ರೆಗೆ ರಾಹುಲ್ ಗಾಂಧಿ ಅವರು ಕರ್ನಾಟಕದಲ್ಲಿಯೇ ಚಾಲನೆ ನೀಡಿದ್ದರು.
ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಜೊತೆಗೆ ಪ್ರಯಾಣಿಸಿದ ಹತ್ತು ಶಾಸಕರ ಪಟ್ಟಿ ಹೀಗಿದೆ:
ಈ ಯಾತ್ರೆಯಲ್ಲಿ ಕರ್ನಾಟಕದ ನಾಯಕರ ಪಾಲ್ಗೊಳ್ಳುವಿಕೆ ಪಕ್ಷಕ್ಕೆ ಹೊಸ ಹುರುಪು ನೀಡಲಿದೆ ಎಂದು ಹೇಳಲಾಗಿದೆ. ಅಲ್ಲದೆ, ಇದು ಕಾಂಗ್ರೆಸ್ ನಾಯಕತ್ವದ ಮೇಲೆ ರಾಜ್ಯದ ನಾಯಕರಿಗಿರುವ ಬದ್ಧತೆಯನ್ನು ತೋರಿಸುತ್ತದೆ ಎಂದು ವಿಶ್ಲೇಷಿಸಲಾಗಿದೆ. ಈ ಯಾತ್ರೆಯು ದೇಶದಲ್ಲಿ ರಾಜಕೀಯವಾಗಿ ಮಹತ್ವ ಪಡೆದಿದ್ದು, ಕರ್ನಾಟಕದಿಂದ ಪಕ್ಷದ ಪ್ರಮುಖ ನಾಯಕರು ಮತ್ತು ಶಾಸಕರು ಇದರಲ್ಲಿ ಪಾಲ್ಗೊಂಡಿರುವುದು ಗಮನಾರ್ಹ ಸಂಗತಿಯಾಗಿದೆ.
ಕಳೆದ ಚುನಾವಣೆಯಲ್ಲಿ ಮತ ಚಲಾವಣೆಯಲ್ಲಿ ಗೋಲ್ಮಾಲ್ ನಡೆದಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕರ್ನಾಟಕದಿಂದ ದೊಡ್ಡ ಅಭಿಯಾನವನ್ನು ಆರಂಭಿಸಿದ್ದರು. ಇದಕ್ಕೆ ಕಾರಣ ಇಡೀ ದೇಶದಲ್ಲಿ ಕೆಲವೇ ರಾಜ್ಯಗಳಲ್ಲಿರುವ ಕಾಂಗ್ರೆಸ್ ಸರ್ಕಾರದ ಪೈಕಿ ಅತ್ಯಂತ ಪ್ರಭಲ ಮತ್ತು ಅತಿಹೆಚ್ಚು ಸ್ಥಾನಗಳನ್ನು ಹೊಂದಿದ ರಾಜ್ಯ ನಮ್ಮ ಕರ್ನಾಟಕ ಆಗಿದೆ. ಆದರೆ, ನಮ್ಮ ರಾಜ್ಯದಲ್ಲಿ ಇದ್ದಿದ್ದನ್ನು ಇfದಂತೆ ಫಿಲ್ಟರ್ ಇಲ್ಲದೆ ಮಾತನಾಡುತ್ತಿದ್ದ ಸಚಿವ ಕೆ.ಎನ್. ರಾಜಣ್ಣ ಅವರು ಲೋಕಸಭಾ ಚುನಾವಣೆ ನಡೆದಾಗ ನಮ್ಮ ಸರ್ಕಾರವೇ ಅಧಿಕಾರದಲ್ಲಿತ್ತು. ಹೀಗಾಗಿ, ನಾವು ಮತ ಚಲಾವಣೆಯಲ್ಲಿ ಗೋಲ್ಮಾಲ್ ಆಗಿದೆ ಎಂದರೆ ನಮ್ಮ ಸರ್ಕಾರಕ್ಕೆ ನಾಚಿಕೆ ಆಗುತ್ತದೆ ಎಂದು ಮಾತನಾಡಿದ್ದರು. ಈ ವಿಚಾರ ನೇರವಾಗಿ ರಾಹುಲ್ ಗಾಂಧಿ ಕಿವಿಗೆ ಬಿದ್ದಿದೆ. ಇದರ ಬೆನ್ನಲ್ಲಿಯೇ ಸಚಿವ ಕೆ.ಎನ್. ರಾಜಣ್ಣ ಅವರು ಮೊದಲ ದಿನ ಅಧಿವೇಶನಕ್ಕೆ ಹಾಜರಾದ ತಕ್ಷಣವೇ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಿ ಆದೇಶ ಹೊರಡಿಸಲಾಗಿದೆ. ಇದು ನೇರವಾಗಿ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಹೈಕಮಾಂಡ್ ಆದೇಶ ಎಂಬುದು ತಿಳಿದುಬಂದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.