ದ್ವಿತೀಯ ಪಿಯು ಫಲಿತಾಂಶ ಪ್ರಕಟ : ಪ್ರಥಮ ಸ್ಥಾನಿಗರು ಇವರು

Published : Apr 30, 2018, 12:35 PM IST
ದ್ವಿತೀಯ ಪಿಯು ಫಲಿತಾಂಶ ಪ್ರಕಟ : ಪ್ರಥಮ ಸ್ಥಾನಿಗರು ಇವರು

ಸಾರಾಂಶ

2017-18 ನೇ ಸಾಲಿನ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಎಂದಿನಂತೆ ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.  ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ ಸ್ಥಾನ ಪಡೆದಿದೆ. ಕೊಡುಗು ಮೂರನೇ ಸ್ಥಾನ ಪಡೆದಿದೆ. ಚಿಕ್ಕೋಡಿ ಕೊನೆಯ ಸ್ಥಾನ ಪಡೆದಿದೆ. 

ಬೆಂಗಳೂರು : 2017-18 ನೇ ಸಾಲಿನ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಎಂದಿನಂತೆ ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. 

ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ ಸ್ಥಾನ ಪಡೆದಿದೆ. ಕೊಡುಗು ಮೂರನೇ ಸ್ಥಾನ ಪಡೆದಿದೆ. ಚಿಕ್ಕೋಡಿ ಕೊನೆಯ ಸ್ಥಾನ ಪಡೆದಿದೆ. 

ಈ ಬಾರಿ ಒಟ್ಟು  ಶೇ.59.56 ರಷ್ಟು  ಫಲಿತಾಂಶ ಬಂದಿದೆ. ಕಳೆದ ಬಾರಿಗಿಂತ ಈ ವರ್ಷ ಫಲಿತಾಂಶದಲ್ಲಿ ಹೆಚ್ಚಳ ಕಂಡು ಬಂದಿದೆ. 

ಶೇಕಡ ನೂರು ಫಲಿತಾಂಶ ಪಡೆದ ಕಾಲೇಜುಗಳ ಸಂಖ್ಯೆ 68. ಶೂನ್ಯ ಫಲಿತಾಂಶ ಪಡೆದ ಕಾಲೇಜುಗಳ ಸಂಖ್ಯೆ 118. ಪರೀಕ್ಷೆಗೆ ಒಟ್ಟು 6 ಲಕ್ಷ 90 ಸಾವಿರ ವಿದ್ಯಾರ್ಥಿಗಳು ಹಾಜರಾಗಿದ್ದರು. 

ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆಯು ಶೇ.91.49 ರಷ್ಟು ಫಲಿತಾಂಶ ಪಡೆದುಕೊಂಡು ಮೊದಲ ಸ್ಥಾನದಲ್ಲಿದ್ದು, ಶೇ. 90.67 ಅಂಕಗಳನ್ನು ಪಡೆದುಕೊಳ್ಳುವ ಮೂಲಕ  ಉಡುಪಿ ಜಿಲ್ಲೆ  2ನೇ ಸ್ಥಾನವನ್ನು ಪಡೆದುಕೊಂಡಿದೆ. 

ಇನ್ನು ಕೊಡಗು ಶೇ.83.94 ಅಂಕಗಳನ್ನು ಪಡೆಯುವ ಮೂಲಕ ಮೂರನೇ ಸ್ಥಾನವನ್ನು ಪಡೆದುಕೊಂಡಿದೆ. 

ಈ ಬಾರಿ ಕಲಾ ವಿಭಾಗದಲ್ಲಿ ಶೇ.45.13 ಅಂಕಗಳು ಬಂದಿದ್ದು, ವಿಜ್ಞಾನ ವಿಭಾಗದಲ್ಲಿ ಶೇ.67.48 ಅಂಕಗಳು ಬಂದಿದೆ. ವಾಣಿಜ್ಯ ವಿಭಾಗದಲ್ಲಿ 63.64 ಅಂಕಗಳು ಬಂದಿವೆ.

ಕಲಾ ವಿಭಾಗದಲ್ಲಿ  ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಇಂದು ಇಂಡಿಪೆಂಡೆಂಟ್ ಪಿಯು ಕಾಲೇಜಿನ ಸ್ವಾತಿ 595 ಅಂಕಗಳನ್ನು ಪಡೆದುಕೊಳ್ಳುವ ಮೂಲಕ ರಾಜ್ಯಕ್ಕೆ ಮೊದಲ ಸ್ಥಾನ ಪಡೆದುಕೊಂಡಿದ್ದಾರೆ. 

ವಾಣಿಜ್ಯ ವಿಭಾಗದಲ್ಲಿ 595 ಅಂಕಗಳನ್ನು ಪಡೆದುಕೊಂಡು ಮಲ್ಲೇಶ್ವರಂ ವಿದ್ಯಾಮಂದಿರ ಪಿಯು ಕಾಲೇಜಿನ ವರ್ಷಿಣಿ ಎಂ ಭಟ್ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. 

ವಿಜ್ಞಾನ  ವಿಭಾಗದಲ್ಲಿ ಬೆಂಗಳೂರಿನ ಸರ್ದಾರ್ ಪಟೇಲ್ ಪಿಯು ಕಾಲೇಜಿನ ಕೃತಿ ಮುತ್ತಗಿ 597 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. 

ಪಿಯು ಫಲಿತಾಂಶವನ್ನು ಪಡೆದುಕೊಳ್ಳಲು ನೀವು www.pue.kar.nic.in ಭೇಟಿ ನೀಡಿ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಏಷ್ಯಾನೆಟ್ ಕನ್ನಡಪ್ರಭ ಸುವರ್ಣ ನ್ಯೂಸ್ ವತಿಯಿಂದ ಮಡಿಕೇರಿಯಲ್ಲಿ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ
ಉತ್ತರ ಕನ್ನಡ: ಯುವಜನತೆಯಲ್ಲಿ ಹೆಚ್ಚುತ್ತಿದೆ ಹೆಚ್‌ಐವಿ ಸೋಂಕು, ಜೆನ್ ಝೀ ಕಿಡ್‌ ಗಳಲ್ಲೇ ಅತೀ ಹೆಚ್ಚು!