‘ಜಾರಕಿಹೊಳಿ ಹಿಂದೆ ಇದ್ದಾರೆ ಶಾಸಕರು : ಮೇ 23ರ ಬಳಿ ಭಾರೀ ಬದಲಾವಣೆ’

Published : May 05, 2019, 09:42 AM IST
‘ಜಾರಕಿಹೊಳಿ ಹಿಂದೆ ಇದ್ದಾರೆ ಶಾಸಕರು : ಮೇ 23ರ ಬಳಿ ಭಾರೀ ಬದಲಾವಣೆ’

ಸಾರಾಂಶ

ಕಾಂಗ್ರೆಸ್ ಅತೃಪ್ತ ಮುಖಂಡ ರಮೇಶ್ ಜಾರಕಿಹೊಳಿ ಹಿಂದೆ ಶಾಸಕರು ಇದ್ದು, ಲೋಕಸಭಾ ಚುನಾವಣಾ ಫಲಿತಾಂಶದ ಬಳಿಕ ರಾಜ್ಯ ರಾಜಕೀಯದಲ್ಲಿ ಮಹತ್ವದ ಬದಲಾವಣೆ ಆಗಲಿದೆ ಎಂದು ಇನ್ನೋರ್ವ ಮುಖಂಡ ಹೇಳಿದ್ದಾರೆ.

ಬಳ್ಳಾರಿ: ರಮೇಶ್‌ ಜಾರಕಿಹೊಳಿ ಒಬ್ಬಂಟಿಯಲ್ಲ. ಅವರ ಹಿಂದೆ ಶಾಸಕರಿದ್ದಾರೆ. ಮೇ 23ರ ನಂತರ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಬದಲಾವಣೆಯಾಗಲಿದೆ. ಸ್ಥಳೀಯ ಸಂಸ್ಥೆಗಳ ಚುನಾವಣೆ ಮುನ್ನವೇ ಮೈತ್ರಿ ಸರ್ಕಾರ ಪತನವಾಗುತ್ತದೆ ಎಂದು ಮೊಳಕಾಲ್ಮುರು ಶಾಸಕ ಬಿ.ಶ್ರೀರಾಮುಲು ಹೇಳಿದ್ದಾರೆ. 

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಹಾಗೂ ಜೆಡಿಎಸ್‌ ನಾಯಕರ ನಡುವೆ ಮುನಿಸು ಶುರುವಾಗಿದೆ. ಈಗಾಗಲೇ ಒಬ್ಬೊರ ಮೇಲೊಬ್ಬರು ಹರಿಹಾಯುತ್ತಿದ್ದಾರೆ. ಎರಡೂ ಪಕ್ಷಗಳ ಆಂತರಿಕ ಕಚ್ಚಾಟದಿಂದ ಮೈತ್ರಿ ಸರ್ಕಾರ ಅಸ್ತಿತ್ವ ಕಳೆದುಕೊಳ್ಳುತ್ತದೆ ಎಂದರು. ರಾಜ್ಯದ ರಾಜಕೀಯ ಬೆಳವಣಿಗೆ ನೋಡಿದರೆ ರಮೇಶ್‌ ಜಾರಕಿಹೊಳಿ ಅವರು ಹೇಳಿದಂತೆ ಹಾಲಿಗಳು ಮಾಜಿಯಾಗಬಹುದು. ಮಾಜಿಗಳು ಹಾಲಿಯಾಗಬಹುದು ಎಂದೆನಿಸುತ್ತದೆ ಎಂದಿದ್ದಾರೆ.

ರಾಜ್ಯಾಧ್ಯಕ್ಷ ಹುದ್ದೆ ಆಕಾಂಕ್ಷಿಯಲ್ಲ:  ನಾನು ಪಕ್ಷದ ರಾಜ್ಯಾಧ್ಯಕ್ಷ ಹುದ್ದೆಯ ಆಕಾಂಕ್ಷಿಯಲ್ಲ. ನಾನೊಬ್ಬ ಸಾಮಾನ್ಯ ಕಾರ್ಯಕರ್ತನಾಗಿ ಪಕ್ಷದ ಸಂಘಟನೆ ಮಾಡುತ್ತಿದ್ದೇನೆ. ನಮ್ಮ ಪಕ್ಷದಲ್ಲಿ ವೈಯಕ್ತಿಕ ತೀರ್ಮಾನ ಕೈಗೊಳ್ಳುವಂತಿಲ್ಲ. ರಾಜ್ಯಾಧ್ಯಕ್ಷರ ನೇಮಕ ವಿಚಾರದಲ್ಲಿ ಪಕ್ಷ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು ಬದ್ಧನಾಗಿದ್ದೇನೆ ಎಂದು ತಿಳಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗರ್ಭಧರಿಸಿ 9 ತಿಂಗಳು ಪೂರೈಸಿದ ಹಸುವಿಗೆ ಸೀಮಂತ ಮಾಡಿದ ಮಂಡ್ಯ ರೈತ
ಶೇ.11ರಷ್ಟು ಟೊಯೋಟಾ ಕಾರುಗಳು ರಾಜ್ಯದಲ್ಲೇ ಸೇಲ್‌