
ನವದೆಹಲಿ(ಸೆ.29): ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವೆ ಉಮಾಭಾರತಿ ನೇತೃತ್ವದಲ್ಲಿ ನಡೆದ ಕರ್ನಾಟಕ ಮತ್ತು ತಮಿಳುನಾಡು ಅಧಿಕಾರಿಗಳ ಸಂಧಾನ ಸಭೆ ಯಾವುದೇ ನಿರ್ಧಾರ ಕೈಗೊಳ್ಳುವಲ್ಲಿ ವಿಫಲವಾಗಿದೆ.
ವಸ್ತು ಸ್ಥಿತಿ ಅಧ್ಯಯನಕ್ಕಾಗಿ ಉಭಯ ರಾಜ್ಯಗಳಿಗೂ ಕೇಂದ್ರ ತಂಡವನ್ನ ಕಳುಹಿಸುವಂತೆ ಸಿಎಂ ಸಿದ್ದರಾಮಯ್ಯ ಮುಂದಿಟ್ಟ ಪ್ರಸ್ತಾಪವನ್ನ ತಮಿಳುನಾಡು ಸರ್ಕಾರ ತಿರಸ್ಕರಿಸಿದೆ. ಯಾವುದೇ ಕೇಂದ್ರ ತಂಡದ ಅಧ್ಯಯನದ ಅವಶ್ಯಕತೆ ಇಲ್ಲ ಎಂದು ತಮಿಳುನಾಡು ಹಠಮಾರಿ ಧೋರಣೆ ತಳೆದಿದೆ. ಸಭೆ ಬಳಿಕ ಮಾತನಾಡಿದ ಜಲಸಂಪನ್ಮೂಲ ಸಚಿವೆ ಉಮಾಭಾರತಿ, ಎರಡೂ ರಾಜ್ಯಗಳ ಅಭಿಪ್ರಾಯ ಸಂಗ್ರಹಿಸಿದ್ದೇವೆ. ಕೇಂದ್ರದ ನಿರ್ಣಯವನ್ನು ಸುಪ್ರೀಂಕೋರ್ಟ್ಗೆ ತಿಳಿಸುತ್ತೇವೆ ಎಂದು ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.