945 ಕೋಟಿ ಬಾಕಿ ಬಿಡುಗಡೆಗೆ ಕೇಂದ್ರಕ್ಕೆ ಜಮೀರ್‌ ಅಹ್ಮದ್ ಮೊರೆ

First Published Jun 30, 2018, 11:00 AM IST
Highlights

ರಾಜ್ಯದಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಖರೀದಿಸಿದ ಪಡಿತರ ಬಾಕಿಯನ್ನು ಕೇಂದ್ರ ಸರ್ಕಾರ ಉಳಿಸಿಕೊಂಡಿದ್ದು, ಕಳೆದ ಮೂರು ವರ್ಷಗಳ .954 ಕೋಟಿ ಬಾಕಿಯನ್ನು ಶೀಘ್ರವೇ ಬಿಡುಗಡೆ ಮಾಡಬೇಕು ಎಂದು ರಾಜ್ಯದ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಜಮೀರ್‌ ಅಹ್ಮದ್‌ ಖಾನ್‌ ಒತ್ತಾಯಿಸಿದ್ದಾರೆ.

ನವದೆಹಲಿ :  ರಾಜ್ಯದಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಖರೀದಿಸಿದ ಪಡಿತರ ಬಾಕಿಯನ್ನು ಕೇಂದ್ರ ಸರ್ಕಾರ ಉಳಿಸಿಕೊಂಡಿದ್ದು, ಕಳೆದ ಮೂರು ವರ್ಷಗಳ .954 ಕೋಟಿ ಬಾಕಿಯನ್ನು ಶೀಘ್ರವೇ ಬಿಡುಗಡೆ ಮಾಡಬೇಕು ಎಂದು ರಾಜ್ಯದ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಜಮೀರ್‌ ಅಹ್ಮದ್‌ ಖಾನ್‌ ಒತ್ತಾಯಿಸಿದ್ದಾರೆ.

ದೆಹಲಿಯ ವಿಜ್ಞಾನ ಭವನದಲ್ಲಿ ಕೇಂದ್ರ ಗ್ರಾಹಕರ ವ್ಯವಹಾರಗಳ ಸಚಿವ ರಾಮ… ವಿಲಾಸ್‌ ಪಾಸ್ವಾನ್‌ ಅವರ ನೇತೃತ್ವದಲ್ಲಿ ನಡೆದ ಆಹಾರ ಮತ್ತು ನಾಗರಿಕ ಸರಬರಾಜು ಸಚಿವರ ಸಭೆಯಲ್ಲಿ ಅವರು ಕರ್ನಾಟಕದ ಪ್ರತಿನಿಧಿಯಾಗಿ ಮಾತನಾಡಿ, ಇಲಾಖೆಗೆ ಸಂಬಂಧಪಟ್ಟಂತೆ ರಾಜ್ಯದ ಹಲವು ಬೇಡಿಕೆಗಳನ್ನು ಮುಂದಿಟ್ಟರು.

ನ್ಯಾಯಬೆಲೆ ಅಂಗಡಿಗಳ ಮಾಲೀಕರ ಕಮಿಷನ್‌ ಪ್ರಸಕ್ತ ಕ್ವಿಂಟಾಲ್ ಗೆ .87 ಇದ್ದು ಇದನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು 50:50ರ ಅನುಪಾತದಲ್ಲಿ ಹಂಚಿಕೊಳ್ಳುತ್ತಿವೆ. ಈ ಕಮಿಷನ್‌ ಅನ್ನು ಕ್ವಿಂಟಾಲ…ಗೆ .150ಕ್ಕೆ ಏರಿಸಬೇಕು ಎಂದು ರಾಜ್ಯ ಸರ್ಕಾರವು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ.

ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಗ್ರಾಹಕರ ದೂರು ದುಮ್ಮಾನ ವ್ಯವಸ್ಥೆಯನ್ನು ಸಬಲೀಕರಣಗೊಳಿಸಲು ವರ್ಷಕ್ಕೆ .10 ಕೋಟಿ ರಾಜ್ಯಗಳಿಗೆ ನೀಡಬೇಕು, ಪಡಿತರದ ಸಾಗಣೆ ವೆಚ್ಚ ಹೆಚ್ಚಾಗುತ್ತಿದ್ದು ಈಗಿರುವ ಪ್ರತಿ ಕ್ವಿಂಟಾಲ…ಗೆ .90 ಅನ್ನು .110 ರಿಂದ .120 ಗಳಿಗೇರಿಸಬೇಕು ಎಂದು ಜಮೀರ್‌ ಕೇಂದ್ರ ಸರ್ಕಾರವನ್ನು ಕೋರಿದ್ದಾರೆ.

ಇನ್ನೆರಡು ದಿನದಲ್ಲಿ ಪಡಿತರ ಚೀಟಿಗೆ ಹೆಸರು ಸೇರ್ಪಡೆಗೊಳಿಸಲು ಅವಕಾಶ ಕಲ್ಪಿಸಲಾಗುವುದು. ಚುನಾವಣೆ ಸಂಬಂಧವಾಗಿ ಪಡಿತರ ಚೀಟಿಗೆ ಹೆಸರು ಸೇರಿಸಲು ನಿರ್ಬಂಧ ವಿಧಿಸಲಾಗಿತ್ತು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಕಾರ್ಯದರ್ಶಿ ಪಂಕಜ್‌ ಪಾಂಡೆ ಕನ್ನಡ ಪ್ರಭಕ್ಕೆ ತಿಳಿಸಿದ್ದಾರೆ.

ನಖ್ವಿ ಭೇಟಿಯಾದ ಜಮೀರ್‌:  ಕೇಂದ್ರದ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಮುಖ್ತಾರ್‌ ಅಬ್ವಾಸ್‌ ನಖ್ವಿ ಅವರನ್ನು ರಾಜ್ಯದ ಅಲ್ಪಸಂಖ್ಯಾತ ವ್ಯವಹಾರಗಳು ಮತ್ತು ಹಜ್‌ ಹಾಗೂ ವಕ್ಫ್ ಸಚಿವರೂ ಆಗಿರುವ ಜಮೀರ್‌ ಶುಕ್ರವಾರ ಸಂಜೆ ನವದೆಹಲಿಯಲ್ಲಿ ಭೇಟಿಯಾದರು. ಇದು ಒಂದು ಸೌಹಾರ್ದಯುತ ಭೇಟಿಯಾಗಿತ್ತು ಎಂದಷ್ಟೇ ತಿಳಿದುಬಂದಿದೆ.

ಪಡಿತರ ವ್ಯವಸ್ಥೆಯಲ್ಲಿ ತೊಗರಿಯನ್ನು ವಿತರಿಸಲು ಅವಕಾಶ ನೀಡಬೇಕು. ರಾಜ್ಯದಲ್ಲಿ ಈಗಾಗಲೇ ಹೆಚ್ಚುವರಿಯಾಗಿ ತೊಗರಿ ಖರೀದಿಸಿಡಲಾಗಿದೆ. ಕಾರ್ಬೋಹೈಡ್ರೆಡ್‌ ಪ್ರಧಾನವಾಗಿರುವ ಅಕ್ಕಿ, ಗೋಧಿಯನ್ನು ಪಡಿತರ ವ್ಯವಸ್ಥೆಯಲ್ಲಿ ಹಂಚಲಾಗುತ್ತಿದ್ದು ತೊಗರಿಯಲ್ಲಿ ಪೊ›ಟೀನ್‌ ಅಂಶವಿದೆ. ಆದ್ದರಿಂದ ತೊಗರಿಯನ್ನು ಪಡಿತರ ವ್ಯವಸ್ಥೆಯಡಿಗೆ ತನ್ನಿ ಎಂದು ಕೇಂದ್ರ ಸರ್ಕಾರವನ್ನು ರಾಜ್ಯ ಸರ್ಕಾರ ಕೋರಿದೆ.

click me!