ಕಾವೇರಿ ಬಿಕ್ಕಟ್ಟು: ಕರ್ನಾಟಕದಿಂದ ಸುಪ್ರೀಂಕೋರ್ಟ್'ಗೆ ಮರು ಪರಿಶೀಲನಾ ಅರ್ಜಿ ಸಲ್ಲಿಕೆ

By Internet DeskFirst Published Sep 26, 2016, 7:13 AM IST
Highlights

ನವದೆಹಲಿ(ಸೆ. 26): ನಿತ್ಯ 6 ಸಾವಿರ ಕ್ಯೂಸೆಕ್‌‌ ನೀರು ಬಿಡಲು ನೀಡಿರುವ ಆದೇಶವನ್ನು ಮಾರ್ಪಾಡು ಮಾಡುವಂತೆ ಕೋರಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್‍'ನಲ್ಲಿ ಮರು ಪರಿಶೀಲನಾ ಅರ್ಜಿ ಸಲ್ಲಿಸಿದೆ. ಸೆ. 20ರಂದು ಸುಪ್ರೀಂಕೋರ್ಟ್ ನೀಡಿರುವ ಆದೇಶ ಪಾಲನೆ ಮಾಡಲು ಉಂಟಾಗಿರುವ ಸಂಕಷ್ಟ ಪರಿಸ್ಥಿತಿಯನ್ನು ಸುಪ್ರೀಂಕೋರ್ಟ್‍ಗೆ ಮನವರಿಕೆ ಮಾಡಿಕೊಡಲು ಸರ್ಕಾರ ಪ್ರಯತ್ನಿಸಿದೆ. ಡಿಸೆಂಬರ್'ವರೆಗೆ ತನಗೆ ಯಾವುದೇ ಹೆಚ್ಚುವರಿ ನೀರನ್ನು ಬಿಡಲು ಸಾಧ್ಯವಾಗುವುದಿಲ್ಲವೆಂದು ರಾಜ್ಯವು ಅಸಹಾಯಕತೆ ತೋಡಿಕೊಂಡಿದೆ. ಜೊತೆಗೆ ಕಾವೇರಿ ಜಲಾನಯನ ಭಾಗದ ಕಬಿನಿ, ಹಾರಂಗಿ, ಕೆಆರ್‍'ಎಸ್ ಹಾಗೂ ಹೇಮಾವತಿ ಜಲಾಶಯಗಳಲ್ಲಿರುವ ನೀರನ್ನು ಕುಡಿಯುವ ಉದ್ದೇಶಕ್ಕೆ ಮಾತ್ರ ಬಳಸಿಕೊಳ್ಳಲು ರಾಜ್ಯ ವಿಧಾನಮಂಡಲದ ಉಭಯ ಸದನಗಳಲ್ಲಿ ಕೈಗೊಂಡಿರುವ ನಿರ್ಣಯದ ಪ್ರತಿಯನ್ನೂ ಸುಪ್ರೀಂಕೋರ್ಟ್‍ಗೆ ಸಲ್ಲಿಸಿದೆ. ಜೊತೆಗೆ ಕಾವೇರಿ ನಿರ್ವಹಣಾ ಮಂಡಳಿಯನ್ನು ಕೇಂದ್ರ ಸರ್ಕಾರ ರಚಿಸುವಂತೆ ನೀಡಿರುವ ಆದೇಶವನ್ನು ಕೂಡ ಮಾರ್ಪಾಡು ಮಾಡುವಂತೆ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್‍ನಲ್ಲಿ ಮನವಿ ಮಾಡಿದೆ.

ಸೆ.20ರಂದು ಸುಪ್ರೀಂಕೋರ್ಟ್ 6 ಸಾವಿರ ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಬಿಡಬೇಕೆಂದು ಕರ್ನಾಟಕಕ್ಕೆ ಆದೇಶ ನೀಡಿತ್ತು.

Latest Videos

click me!