
ಬೆಂಗಳೂರು : ಕುತೂಹಲಕಾರಿ ಸಂಗತಿಯೆಂದರೆ, ಪ್ರಭಾವಿ ಸಚಿವರು ತಮ್ಮ ಖಾತೆಗಳನ್ನು ಉಳಿಸಿಕೊಳ್ಳಲು ಹರಸಾಹಸ ನಡೆಸುತ್ತಿದ್ದರೆ ಸಚಿವ ಸಂಪುಟದ ಏಕೈಕ ಮಹಿಳಾ ಸದಸ್ಯೆ ಜಯಮಾಲಾ ಅವರು ತಮ್ಮ ಬಳಿ ಹೊಂದಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಖಾತೆ ಎರಡನ್ನೂ ಉಳಿಸಿಕೊಳ್ಳುವ ಸಾಧ್ಯತೆಯಿದೆ.
ಕನ್ನಡಪ್ರಭದೊಂದಿಗೆ ಮಾತನಾಡಿದ ಪಕ್ಷದ ಉನ್ನತ ನಾಯಕರೊಬ್ಬರು, ಜಯಮಾಲಾ ಅವರ ಬಳಿ ಇರುವ ಎರಡು ಖಾತೆಗಳು ಅವರ ಬಳಿಯೇ ಮುಂದುವರೆಯುವ ಸಾಧ್ಯತೆ ಹೆಚ್ಚಿದೆ.
ಉಳಿದಂತೆ ಗೃಹ, ಗ್ರಾಮೀಣಾಭಿವೃದ್ಧಿ, ಐಟಿ-ಬಿಟಿ, ವೈದ್ಯ ಶಿಕ್ಷಣದಂತಹ ಪ್ರಮುಖ ಖಾತೆಗಳನ್ನು ಹಿಂಪಡೆಯುವ ವಿಚಾರದ ಬಗ್ಗೆ ರಾಹುಲ್ ಗಾಂಧಿ ಮಟ್ಟದಲ್ಲೇ ತೀರ್ಮಾನವಾಗಬೇಕಿದೆ ಎಂದು ತಿಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.