
ಬೆಂಗಳೂರು : ಚುನಾವಣೆಯಲ್ಲಿ ಪ್ರತಿಯೊಬ್ಬರೂ ಮತದಾನ ಮಾಡಬೇಕು ಎಂಬ ಉದ್ದೇಶವನ್ನು ಆಯೋಗ ಹೊಂದಿದೆ. ವಿವಿಧ ಕಾರಣಗಳಿಂದ ಮತಗಟ್ಟೆಗೆ ನಡೆದುಕೊಂಡು ಬಾರಲು ಸಾಧ್ಯವಾಗದ 12 ಲಕ್ಷ ಮತದಾರರು ಮತದಾರರ ಪಟ್ಟಿಯಲ್ಲಿದ್ದಾರೆ.
ಅಂಗವಿಕಲರು, ಕಾಯಿಲೆಗಳಿಂದ ಬಳಲುತ್ತಿರುವವರನ್ನು ಮತಗಟ್ಟೆಗೆ ಕರೆದುಕೊಂಡು ಬರುವುದಕ್ಕಾಗಿ ವ್ಹೀಲ್ ಚೇರ್ ಸೇರಿದಂತೆ ವಾಹನ ಸೌಲಭ್ಯ ಕಲ್ಪಿಸಲಾಗುವುದು.
ಮಹಿಳಾ ಮತದಾರರು ಹೆಚ್ಚಿರುವ ಮತಗಟ್ಟೆಗಳಲ್ಲಿ ಮಹಿಳಾ ಮತಗಟ್ಟೆಗಳನ್ನು ನಿರ್ಮಿಸಲಾಗುವುದು. ಇಲ್ಲಿ ಮಹಿಳೆಯರನ್ನೇ ಚುನಾವಣಾ ಸಿಬ್ಬಂದಿಯಾಗಿ ಹಾಗೂ ಭದ್ರತೆಗೆ ನಿಯೋಜಿಸಲಾಗುವುದು ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಸಂಜೀವ್‌ಕುಮಾರ್ ತಿಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.