
ಬೆಂಗಳೂರು : ರಾಜ್ಯ ವಿಧಾನಸಭೆಯ ಚುನಾವಣಾ ವೇಳಾಪಟ್ಟಿಇದೇ ತಿಂಗಳ ಅಂತ್ಯದಲ್ಲಿ ಅಥವಾ ಬರುವ ಏಪ್ರಿಲ್ ಮೊದಲ ವಾರದಲ್ಲಿ ಪ್ರಕಟಗೊಳ್ಳಲಿದೆ.
ಈಗಾಗಲೇ ಚುನಾವಣಾ ಆಯೋಗವು ಎಲ್ಲ ಸಿದ್ಧತೆಗಳನ್ನೂ ಕೈಗೊಂಡಿದ್ದು, ಚುನಾವಣೆ ಎದುರಿಸಲು ರಾಜ್ಯ ಚುನಾವಣಾಧಿಕಾರಿಗಳ ಕಚೇರಿ ಸಜ್ಜಾಗಿದೆ. ಎರಡು ಅಥವಾ ಮೂರು ವಾರಗಳಲ್ಲಿ ವೇಳಾಪಟ್ಟಿಪ್ರಕಟಿಸಲಾಗುವುದು. ಬಹುತೇಕ ಮೇ ಮೊದಲ ವಾರದಲ್ಲಿ ಚುನಾವಣೆ ನಿಗದಿಯಾಗಬಹುದು ಎಂದು ಉನ್ನತ ಮೂಲಗಳು ತಿಳಿಸಿವೆ.
‘ನಾವು ಚುನಾವಣೆ ನಡೆಸಲು ಬೇಕಾದ ಎಲ್ಲ ಸಿದ್ಧತೆಗಳನ್ನೂ ಕೈಗೊಳ್ಳುತ್ತಿದ್ದು, ಅಂತಿಮ ಹಂತದಲ್ಲಿದ್ದೇವೆ. ಚುನಾವಣೆ ಎದುರಿಸಲು ಸಕಲ ರೀತಿಯಲ್ಲಿ ಸಜ್ಜಾಗಿದ್ದೇವೆ. ಆದರೆ, ಚುನಾವಣೆಯ ವೇಳಾಪಟ್ಟಿನಿರ್ಧರಿಸುವುದು ಕೇಂದ್ರ ಚುನಾವಣಾ ಆಯೋಗ. ಬಹುತೇಕ ಈ ತಿಂಗಳ ಅಂತ್ಯದಲ್ಲಿ ಅಥವಾ ಏಪ್ರಿಲ್ ಮೊದಲ ವಾರ ವೇಳಾಪಟ್ಟಿಘೋಷಣೆಯಾಗಬಹುದು ಎಂಬ ಮಾಹಿತಿಯಿದೆಯಾದರೂ ಖಚಿತವಾಗಿಲ್ಲ’ ಎಂದು ಆಯೋಗದ ಅಧಿಕಾರಿಗಳು ತಿಳಿಸಿದ್ದಾರೆ.
ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿಯ ರಾಷ್ಟ್ರೀಯ ನಾಯಕರೂ ರಾಜ್ಯಕ್ಕೆ ದಾಂಗುಡಿ ಇಡುತ್ತಿದ್ದು, ವೇಳಾಪಟ್ಟಿಪ್ರಕಟಗೊಳ್ಳುತ್ತಿದ್ದಂತೆಯೇ ಅಭ್ಯರ್ಥಿಗಳ ಪಟ್ಟಿಅಂತಿಮಗೊಂಡು ಪ್ರಚಾರದ ಕಾವು ಜೋರಾಗಲಿದೆ. ಬೇಸಿಗೆಯ ಬಿರು ಬಿಸಿಲಿನ ನಡುವೆ ಚುನಾವಣೆ ಮತ್ತಷ್ಟುಕಾವು ಏರಿಸುವುದರಲ್ಲಿ ಅನುಮಾನವಿಲ್ಲ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.