ಶಾಲಾ ಅವಧಿಯಲ್ಲಿ ಶಿಕ್ಷಕರು ಮೊಬೈಲ್ ಬಳಸುವಂತಿಲ್ಲ..!

First Published Jun 1, 2018, 6:29 PM IST
Highlights

ರಾಜ್ಯದ ಸರ್ಕಾರಿ ಮತ್ತು ಖಾಸಗಿ ಶಾಲೆಗಳಲ್ಲಿ ಇನ್ನು ಮುಂದೆ ಶಿಕ್ಷಕರು ಮೊಬೈಲ್ ಬಳಸುವಂತಿಲ್ಲ. ಶಾಲೆಗಳಲ್ಲಿ ಶಿಕ್ಷಕರು ಮೊಬೈಲ್ ಫೋನ್ ಗಳನ್ನು ಬಳಕೆ ಮಾಡಲು ರಾಜ್ಯ ಸರ್ಕಾರ ನಿಷೇಧ ಹೇರಿದೆ.

ಬೆಂಗಳೂರು(ಜೂ.1): ರಾಜ್ಯದ ಸರ್ಕಾರಿ ಮತ್ತು ಖಾಸಗಿ ಶಾಲೆಗಳಲ್ಲಿ ಇನ್ನು ಮುಂದೆ ಶಿಕ್ಷಕರು ಮೊಬೈಲ್ ಬಳಸುವಂತಿಲ್ಲ.  ಶಾಲೆಗಳಲ್ಲಿ ಶಿಕ್ಷಕರು ಮೊಬೈಲ್ ಫೋನ್ ಗಳನ್ನು ಬಳಕೆ ಮಾಡಲು ರಾಜ್ಯ ಸರ್ಕಾರ ನಿಷೇಧ ಹೇರಿದೆ.

ಈ ಕುರಿತು ಸುತ್ತೋಲೆ ಹೊರಡಿಸಿರುವ ಪ್ರಾಥಮಿಕ ಶಿಕ್ಷಣ ಇಲಾಖೆ, ಶಾಲಾ ಶಿಕ್ಷಕರು ಮತ್ತು ಇತರ ಸಿಬ್ಬಂದಿ ಕೆಲಸದ ಅವಧಿಯಲ್ಲಿ ಮೊಬೈಲ್ ಬಳಸದಂತೆ ತಾಕೀತು ಮಾಡಿದೆ.  ಆದರೆ ಶಾಲಾ ಮುಖ್ಯೋಪಾಧ್ಯಾಯರಿಗೆ ಈ ಆದೇಶ ಅನ್ವಯವಾಗುವುದಿಲ್ಲ. ಆದರೆ ಪಾಠ ಮಾಡುವ  ಸಂದರ್ಭದಲ್ಲಿ ಮುಖ್ಯೋಪಾಧ್ಯಾಯರೂ ಕೂಡ ಮೊಬೈಲ್ ಬಳಸುವಂತಿಲ್ಲ.

ಅಲ್ಲದೇ ಒಂದು ವೇಳೆ ಶಾಲಾ ಅವಧಿಯಲ್ಲಿ ಶಿಕ್ಷಕರು ಮತ್ತು ಇತರ ಸಿಬ್ಬಂದಿ ಮೊಬೈಲ್ ಬಳಸಿದರೆ ಮುಖ್ಯೋಪಾಧ್ಯಾಯರನ್ನೇ ಹೊಣೆ ಮಾಡಲಾಗುವುದು ಎಂದು ಸುತ್ತೋಲೆಯಲ್ಲಿ ಸ್ಪಷ್ಟಪಡಿಸಲಾಗಿದೆ. ಪಾಠದ ಅವಧಿಯಲ್ಲಿ ಶಿಕ್ಷಕರು ಮೊಬೈಲ್ ಬಳಸುವುದು ಅತಿಯಾಗಿದೆ ಎಂದು ಪೋಷಕರು ನೀಡಿದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.

click me!