ಸಕಲ ಗೌರವಗಳೊಂದಿಗೆ ಜಾಫರ್ ಷರೀಫ್‌ ಅಂತ್ಯಕ್ರಿಯೆ

Published : Nov 26, 2018, 10:11 PM IST
ಸಕಲ ಗೌರವಗಳೊಂದಿಗೆ ಜಾಫರ್ ಷರೀಫ್‌ ಅಂತ್ಯಕ್ರಿಯೆ

ಸಾರಾಂಶ

ಕಾಂಗ್ರೆಸ್ ಹಿರಿಯ ನಾಯಕ ಸಿ.ಕೆ.ಜಾಫರ್ ಷರೀಫ್ ಅವರ ಅಂತ್ಯಕ್ರಿಯೆ ಸೋಮವಾರ ಮಿಲ್ಲರ್ಸ್ ರಸ್ತೆಯಲ್ಲಿರುವ ಖಬರಿಸ್ತಾನದಲ್ಲಿ ಮುಸ್ಲಿಂ ಸಂಪ್ರದಾಯದಂತೆ ನಡೆಯಿತು.

ಬೆಂಗಳೂರು[ನ.26]  ಕೇಂದ್ರದ ಮಾಜಿ ರೈಲ್ವೇ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ಸಿ.ಕೆ.ಜಾಫರ್ ಷರೀಫ್(85ವರ್ಷ) ಅಂತಿಮ ಸಂಸ್ಕಾರ  ನೆರವೇರಿಸಲಾಗಿದೆ. ಬೆಂಗಳೂರು ಮಿಲ್ಲರ್ಸ್ ರಸ್ತೆಯಲ್ಲಿರುವ ಖಬರಿಸ್ತಾನದಲ್ಲಿ ಮುಸ್ಲಿಂ ಸಂಪ್ರದಾಯದಂತೆ ಅಂತಿಮ ವಿಧಿ ವಿಧಾನ ನೆರವೇರಿಸಲಾಯಿತು.

ನಂದಿದುರ್ಗಾ ರಸ್ತೆಯ ಜುಮ್ಮಾ ಮಸೀದಿಯಲ್ಲಿ ಷರೀಫ್ ಅವರ ಪಾರ್ಥಿವ ಶರೀರ ಇಟ್ಟು ಪ್ರಾರ್ಥನೆ ಸಲ್ಲಿಸಲಾಯಿತು. ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಷರೀಫ್ ಅವರು ಭಾನುವಾರ ಮಧ್ಯಾಹ್ನ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದರು.

ಸಿಎಂ ಕುಮಾರಸ್ವಾಮಿ, ಕಾಂಗ್ರೆಸ್ ಹಿರಿಯ ಮುಖಂಡ ಗುಲಾಂ ನಬಿ ಆಜಾದ್, ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ದಿನೇಶ್ ಗುಂಡೂರಾವ್, ಸಚಿವ ಯುಟಿ ಖಾದರ್, ವಿಧಾನಪರಿಷತ್ ಸದಸ್ಯ ರಿಜ್ವಾನ್ ಅರ್ಷದ್ ಸೇರಿದಂತೆ ಹಲವು ಮುಖಂಡರು ಷರೀಫ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ಗೌರವ ಸಲ್ಲಿಸಿದರು.ಕೆಪಿಸಿಸಿ ಕಚೇರಿಯಲ್ಲಿ ಷರೀಫ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಿಕೊಡಲಾಗಿತ್ತು.


 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮರ್ಡರ್ ಕೇಸ್ ಟ್ರಯಲ್ ಶುರು.. ಡಿಜಿಪಿ ಅಲೋಕ್ ಬಳಿ ದರ್ಶನ್ ಹೇಳಿದ್ದೇನು? ಸೀಕ್ರೆಟ್ ಇಲ್ಲಿದೆ..
ಬುರ್ಖಾ ಹಾಕದೆ ಹೊರಗೆ ಹೋಗಿದ್ದಕ್ಕೆ ಪತ್ನಿ, ಇಬ್ಬರು ಹೆಣ್ಮಕ್ಕಳ ಕೊಂದ ಪಾಪಿ, ಮನೆಯ ಅಂಗಳದಲ್ಲಿ ಹೂತುಹಾಕಿದ!