ಬಿಜೆಪಿ ಶಾಸಕಾಂಗ ಸಭೆಯಲ್ಲಿ ಸರ್ಕಾರ ರಚನೆ ಬಗ್ಗೆ ಗುಟ್ಟು ಬಿಚ್ಚಿಟ್ಟ ಯಡಿಯೂರಪ್ಪ

Published : Jun 05, 2019, 09:32 PM IST
ಬಿಜೆಪಿ ಶಾಸಕಾಂಗ ಸಭೆಯಲ್ಲಿ ಸರ್ಕಾರ ರಚನೆ ಬಗ್ಗೆ ಗುಟ್ಟು ಬಿಚ್ಚಿಟ್ಟ ಯಡಿಯೂರಪ್ಪ

ಸಾರಾಂಶ

ಲೋಕಸಭಾ ಚುನಾವಣೆಯ ಗೆಲುವಿನ ಸಂಭ್ರಮದ ಜತೆಗೆ ಬಿಜೆಪಿ ಶಾಸಕಾಮಗ ಸಭೆ ನಡೆಯಿತು. ಈ ಸಭೆಯಲ್ಲಿ ಶಾಸಕಾಂಗ ಪಕ್ಷದ ನಾಯಕ ಬಿ.ಎಸ್. ಯಡಿಯೂರಪ್ಪ ಅವರು ಸರ್ಕಾರ ರಚನೆ ಬಗ್ಗೆ ತಮ್ಮ ಶಾಸಕರ ಬಳಿ ಗುಟ್ಟು ಬಿಚ್ಚಿಟ್ಟಿದ್ದಾರೆ.

ಬೆಂಗಳೂರು, [ಜೂನ್.05]: ಲೋಕಸಭಾ ಚುನಾವಣೆಯಲ್ಲಿ ಅಭೂತ ಪೂರ್ವ ಗೆಲುವು ಸಿಕ್ಕಿರುವುದಕ್ಕೆ  ರಾಜ್ಯ ಬಿಜೆಪಿ ತನ್ನ ಕಾರ್ಯಕರ್ತರಿಗೆ ಕೃತಜ್ಞತ ಸಮರ್ಪಣೆ ಸಲ್ಲಿಸಿತು.

ಇಂದು [ಬುಧವಾರ] ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದ್ದ ಸಮಾವೇಶದಲ್ಲಿ ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸುವುದರ ಜತೆಗೆ ನೂತನ ಸಂಸದರಿಗೆ ಸನ್ಮಾನಿಸಲಾಯಿತು. 

ಬಳಿಕ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ಪಕ್ಷದ ಕಚೇರಿ ಜಗನಾಥ್ ಭವನದಲ್ಲಿ ಶಾಸಕಾಂಗ ಸಭೆ ನಡೆಯಿತು. ಸಭೆಯಲ್ಲಿ ಹಲವು ಮಹತ್ವದ ವಿಚಾರಗಳ ಬಗ್ಗೆ ಚರ್ಚೆಗಳು ನಡೆದಿವೆ.

ಅದರಲ್ಲೂ ಮುಖ್ಯವಾಗಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚಿಸವುದರ ಬಗ್ಗೆ ಸುದೀರ್ಘವಾಗಿ ಚರ್ಚೆ ನಡೆಯಿತು ಎಂದು ಮೂಲಗಳು ತಿಳಿಸಿವೆ. ಕಾಂಗ್ರೆಸ್ - ಜೆಡಿಎಸ್ ನಾಯಕರ ಕಚ್ಚಾಟದಿಂದ ಸರ್ಕಾರ ಪತನ ಆಗೋದು ನಿಶ್ಚಿತವಾಗಿದ್ದು, ನಮ್ಮ ಸರ್ಕಾರ ಖಂಡಿತ ರಚನೆ ಆಗಲಿದೆ ಎಂದು ಯಡಿಯೂರಪ್ಪ ತಮ್ಮ ಶಾಸಕರಿಗೆ ಭರವಸೆ ಮೂಡಿಸಿದ್ದಾರೆ.

ನಾವಾಗಿ ಸರ್ಕಾರ ಕೆಡವುದು ಬೇಡ. ಅವರವರೆ ಕಚ್ಚಾಡಿ ಸರ್ಕಾರ ಅಂತ್ಯವಾಗಲಿದೆ. ಅಲ್ಲಿ ತನಕ ನಾವು ಕಾಯೋಣ ಎಂದು ಶಾಸಕರಿಗೆ ಯಿಡಿಯೂರಪ್ಪ ಕಿವಿ ಮಾತು ಹೇಳಿದ್ದಾರೆ ಎಂದು ಪಕ್ಷದ ಮೂಲಗಳಿಂದ ತಿಳಿದುಬಂದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Actress Assault Case: ಆರು ಆರೋಪಿಗಳಿಗೆ 20 ವರ್ಷ ಜೈಲು ಶಿಕ್ಷೆ ಘೋಷಿಸಿದ ಕೇರಳ ಕೋರ್ಟ್‌
ಹುನುಗುಂದದಲ್ಲಿ ಮಂಕಿ ಕ್ಯಾಪ್ ಗ್ಯಾಂಗ್: ಒಂದೇ ರಾತ್ರಿ, 9 ಮನೆ ಕಳವು, ಪೋಲಿಸರ ಮನೆಗಳನ್ನೇ ಬಿಡದ ಖದೀಮರು!