
ಬೆಂಗಳೂರು, [ಸೆ.22]: 3 ಸ್ಥಾನಗಳಿಗೆ ವಿಧಾನಸಭೆಯಿಂದ ವಿಧಾನಪರಿಷತ್ತಿಗೆ ನಡೆಯುವ ಚುನಾವಣೆ ಭಾರೀ ಕುತೂಹಲ ಮೂಡಿಸಿದೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಸಮ್ಮಿಶ್ರದಿಂದ 3ಕ್ಕೆ ಮೂರು ಸ್ಥಾನಗಳಲ್ಲಿ ಗೆಲ್ಲುವ ವಿಶ್ವಾಸದಲ್ಲಿವೆ. ಕಾಂಗ್ರೆಸ್ 2, ಜೆಡಿಎಸ್ 1 ಸ್ಥಾನ ಗೆಲ್ಲುವುದು ಪಕ್ಕಾ ಆಗಿದೆ.
ಇನ್ನು ಬಿಜೆಪಿಗೆ ಗೆಲುವಿನ ಸಾಧ್ಯತೆ ಇಲ್ಲದಿದ್ದರೂ ಮೂರು ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ತೀರ್ಮಾನಿಸಿದ್ದು, ಭಾನುವಾರ ಅಂತಿಮಗೊಳಿಸುವ ಸಾಧ್ಯತೆಯಿದೆ. ಇದು ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲವನ್ನು ಮೂಡಿಸಿದೆ.
ಸೋಮವಾರ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು, ಯಾರನ್ನು ಕಣಕ್ಕಿಳಿಸಬೇಕು ಎಂಬುದರ ಬಗ್ಗೆ ತೆರೆಮರೆಯಲ್ಲಿ ಚರ್ಚೆ ಆರಂಭವಾಗಿದೆ.
ಅತೃಪ್ತಿಯ ಲಾಭದ ನಿರೀಕ್ಷೆಯಲ್ಲಿ ಬಿಜೆಪಿ
ಸಮ್ಮಿಶ್ರ ಸರ್ಕಾರದ ಪಾಲುದಾರ ಪಕ್ಷಗಳಾದ ಜೆಡಿಎಸ್ ಮತ್ತು ಕಾಂಗ್ರೆಸ್ಸಿನ ಶಾಸಕರಲ್ಲಿ ಇದೆ ಎನ್ನಲಾದ ಅತೃಪ್ತಿಯ ಲಾಭ ಪಡೆದುಕೊಳ್ಳಲು ಬಿಜೆಪಿ ಹವಣಿಸುತ್ತಿದೆ.
ಪ್ರಸ್ತುತ ಸಮ್ಮಿಶ್ರ ಸರ್ಕಾರ ವಿರುದ್ಧ ಭಿನ್ನಮತ ಸ್ಫೋಟಗೊಂಡಿದ್ದು, ಅಡ್ಡಮತದಾನ ನಡೆಯುವ ಲಕ್ಷಣಗಳು ದಟ್ಟವಾಗಿವೆ. ಹಿನ್ನೆಲೆಯಲ್ಲಿ ಇದನ್ನೇ ಬಂಡವಾಳವಾಗಿ ಇಟ್ಟುಕೊಂಡು ಸೋತರೂ ಚಿಂತೆ ಇಲ್ಲ ಅಂತ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಸಲು ಪ್ಲಾನ್ ಮಾಡಿದೆ.
ರೇಸ್‌ನಲ್ಲಿ ಯಾರ್ಯಾರು?
ವಿಧಾನಪರಿಷತ್ತಿನ ಮಾಜಿ ಸದಸ್ಯರಾದ ಬಿ.ಜೆ.ಪುಟ್ಟಸ್ವಾಮಿ, ಡಿ.ಎಸ್.ವೀರಯ್ಯ, ಭಾರತಿ ಶೆಟ್ಟಿ, ರಾಜ್ಯ ಬಿಜೆಪಿಯ ಖಜಾಂಚಿ ಸುಬ್ಬ ನರಸಿಂಹ ಅವರ ಹೆಸರುಗಳನ್ನು ಕೇಳಿಬರುತ್ತಿವೆ. ಅಚ್ಚರಿ ಎಂಬಂತೆ ಚನ್ನಪಟ್ಟಣದ ಮಾಜಿ ಶಾಸಕ ಸಿ.ಪಿ.ಯೋಗೇಶ್ವರ್ ಅವರ ಹೆಸರೂ ಗಂಭೀರವಾಗಿ ಕೇಳಿರುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.