ಕರ್ನಾಟಕ ಬಂದ್ ದಿನಾಂಕ ಬದಲು

Published : Jan 11, 2018, 05:09 PM ISTUpdated : Apr 11, 2018, 01:01 PM IST
ಕರ್ನಾಟಕ ಬಂದ್ ದಿನಾಂಕ ಬದಲು

ಸಾರಾಂಶ

ಜ.25ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡು ಪ್ರಧಾನಿಗೆ ಕಪ್ಪು ಬಾವುಟ ಪ್ರದರ್ಶನ ಮಾಡುತ್ತೇವೆ. ಬಂದ್'ಗೆ ಚಿತ್ರರಂಗ ಕೂಡ ಸಂಪುರ್ಣ ಬೆಂಬಲ ನೀಡಲಿದೆ. ಅಂದು ಯಾವುದೇ ಚಿತ್ರ ಪ್ರದರ್ಶನ ಹಾಗೂ ಚಿತ್ರೀಕರಣ ಇರುವುದಿಲ್ಲ'

ಬೆಂಗಳೂರು(ಜ.11): ಕನ್ನಡಪರ ಸಂಘಟನೆಗಳು ಮಹದಾಯಿ ಯೋಜನೆ ಜಾರಿಗೆ ಆಗ್ರಹಿಸಿ ರಾಜ್ಯ ಬಂದ್'ಗೆ ಕರೆ ನೀಡಿದ್ದ ದಿನಾಂಕವನ್ನು ಜ.27ರ ಬದಲಾಗಿ ಜ.25ಕ್ಕೆ ಬಂದ್ ಹಮ್ಮಿಕೊಳ್ಳಲು ನಿರ್ಧರಿಸಿವೆ.

ಸಾಲು ಸಾಲು ರಜೆಯ ಹಿನ್ನಲೆಯಲ್ಲಿ ಬಂದ್ ದಿನಾಂಕವನ್ನು ಬದಲಾವಣೆ ಮಾಡಿರುವುದಾಗಿ ಕನ್ನಡಪರ ಸಂಘಟನೆಗಳ ಒಕ್ಕೂಟಗಳ ಅಧ್ಯಕ್ಷ ವಾಟಾಳ್ ನಾಗರಾಜ್ ತಿಳಿಸಿದ್ದಾರೆ.  

ಜ.25ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡು ಪ್ರಧಾನಿಗೆ ಕಪ್ಪು ಬಾವುಟ ಪ್ರದರ್ಶನ ಮಾಡುತ್ತೇವೆ. ಬಂದ್'ಗೆ ಚಿತ್ರರಂಗ ಕೂಡ ಸಂಪುರ್ಣ ಬೆಂಬಲ ನೀಡಲಿದೆ. ಅಂದು ಯಾವುದೇ ಚಿತ್ರ ಪ್ರದರ್ಶನ ಹಾಗೂ ಚಿತ್ರೀಕರಣ ಇರುವುದಿಲ್ಲ' ಎಂದು ಹೇಳಿದ್ದಾರೆ.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ. ಗೋವಿಂದ್ ಮಾತನಾಡಿ, ಕರ್ನಾಟಕ ಮೋದಿಯವರ ಗುಲಾಮರಲ್ಲಾ. ಮಹದಾಯಿ ಮತ್ತು ಕಳಸಾ ಬಂಡೂರಿಯನ್ನು ಮೋದಿಯವರು ಕಡೆಗಣಿಸಿದ್ದಾರೆ. ಪ್ರಧಾನ ಮಂತ್ರಿಯವರು  ಗೋವಾ ಸರ್ಕಾರವನ್ನು ವಜಾ ಮಾಡಿ ನಮಗೆ ನೀರು ಕೋಡಲಿ. ಮೋದಿ ರಾಜ್ಯಕ್ಕೆ ಬರುವ ದಿನ ಪ್ರಧಾನಿ ವಿರುದ್ಧ ತೀವ್ರ ಹೋರಾಟ ಮಾಡುತ್ತೇವೆ' ಎಂದು ತಿಳಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಾಜಕೀಯ ಸೇಡಿಗಾಗಿ ದ್ವೇಷ ಭಾಷಣ ಕಾಯ್ದೆ ಜಾರಿ: ಮಾಜಿ ಐಪಿಎಸ್‌ ಅಧಿಕಾರಿ ಭಾಸ್ಕರ್‌ ರಾವ್‌ ಲೇಖನ
ವಾಕ್‌ ಸ್ವಾತಂತ್ರ್ಯಕ್ಕೆ ದ್ವೇಷ ಭಾಷಣ ವಿಧೇಯಕ ವಿರುದ್ಧವಾಗಿಲ್ಲ: ವಿ.ಗೋಪಾಲ ಗೌಡ ಲೇಖನ