
ಮೈಸೂರು[ಸೆ.29]: ಹುಣಸೂರು ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿಯಿಂದ ನಾನೇ ಸ್ಪರ್ಧಿಸುವುದಾಗಿ ಘೋಷಿಸಿರುವ ಅನರ್ಹ ಶಾಸಕ ಎಚ್.ವಿಶ್ವನಾಥ್ ಈ ವಿಚಾರವಾಗಿ ಎದ್ದಿರುವ ಊಹಾಪೋಹಗಳನ್ನು ಅಲ್ಲಗೆಳೆದಿದ್ದಾರೆ.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಪ್ರೀಂಕೋರ್ಟ್‌ಲ್ಲಿರುವ ನಮ್ಮ ಅರ್ಜಿ ವಿಚಾರವಾಗಿ ಐತಿಹಾಸಿಕ ತೀರ್ಪು ಬರಲಿದೆ. ಈಗಿನ ಪೀಠದಿಂದ ಸಂವಿಧಾನ ಪೀಠಕ್ಕೂ ನಮ್ಮ ಕೇಸ್ ರವಾನೆಯಾಗಬಹುದು. ಪರಿಸ್ಥಿತಿ ಹೀಗಿರುವಾಗ ಯಾರೋ ತಮ್ಮ ತೆವಲಿಗೆ ಹುಣಸೂರು ಕ್ಷೇತ್ರದ ಟಿಕೆಟ್ ಬೇರೆಯವರಿಗೆ ಘೋಷಣೆಯಾಗಿದೆ ಎಂದು ವದಂತಿ ಹಬ್ಬಿಸಿದ್ದಾರೆ. ಇದು ಗೊಂದಲ ಸೃಷ್ಟಿಸುವ ಕೆಲಸ. ಯಾವ ಶಾಸಕನೂ ತಾನು ಗೆದ್ದ ಕ್ಷೇತ್ರವನ್ನು ಯಾರಿಗೂ ಬಿಟ್ಟು ಕೊಡೋಲ್ಲ ಎಂದಿದ್ದಾರೆ.
ಅಲ್ಲದೇ ಬಿಜೆಪಿ ಹೈಕಮಾಂಡ್ ಬಹಳ ಗಟ್ಟಿಯಾಗಿದ್ದು ಸೂಕ್ತ ಸಂದರ್ಭದಲ್ಲಿ ಸೂಕ್ತ ನಿರ್ಣಯ ತೆಗೆದುಕೊಳ್ಳುತ್ತದೆ. ಇನ್ನು ಸಿಎಂ ನನ್ನನ್ನ ಮನವೊಲಿಸುವ ಪ್ರಶ್ನೆ ಎಲ್ಲಿಂದ ಬಂತು ಎಂದು ಮರು ಪ್ರಶ್ನೆ ಹಾಕಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.