
ಬೆಂಗಳೂರು[ಸೆ.22]: ರಾಜ್ಯದಲ್ಲಿ ಮುಂದಿನ ತಿಂಗಳು ನಡೆಯಲಿರುವ 15 ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಬಿಜೆಪಿ ಬಹುಮತ ಸಾಧಿಸಲು ಆರು ಕ್ಷೇತ್ರಗಳಲ್ಲಿ ಗೆಲ್ಲಲೇ ಬೇಕಿದೆ. ಒಂದು ವೇಳೆ ಆರು ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸದಿದ್ದರೆ ಬಿಜೆಪಿ ಸರ್ಕಾರಕ್ಕೆ ಕಷ್ಟಉಂಟಾಗಲಿದೆ.
224 ವಿಧಾನಸಭಾ ಕ್ಷೇತ್ರಗಳ ಪೈಕಿ ಪ್ರಸ್ತುತ ಬಿಜೆಪಿ 106 (ಸ್ಪೀಕರ್ ಮತ್ತು ಪಕ್ಷೇತರ ಅಭ್ಯರ್ಥಿ ಸೇರಿ) ಇದ್ದು, ಜೆಡಿಎಸ್ 34 ಹಾಗೂ ಕಾಂಗ್ರೆಸ್ 66, ಬಿಎಸ್ಪಿಯ ಒಬ್ಬ ಶಾಸಕರಿದ್ದಾರೆ. ಪ್ರಸ್ತುತ ಎರಡು ಕ್ಷೇತ್ರಗಳಿಗೆ ಚುನಾವಣೆ ಘೋಷಣೆಯಾಗಿಲ್ಲ. ಹೀಗಾಗಿ 222 ಕ್ಷೇತ್ರಗಳ ಲೆಕ್ಕಾಚಾರದಂತೆ ಯಾವುದೇ ಪಕ್ಷ ಸರ್ಕಾರ ರಚನೆ ಮಾಡಲು ಅಗತ್ಯ 112 ಸ್ಥಾನ ಇರಬೇಕಾಗುತ್ತದೆ.
106 ಸ್ಥಾನಗಳನ್ನು ಹೊಂದಿರುವ ಬಿಜೆಪಿ ಸರಳ ಬಹುಮತ ಸಾಧಿಸಲು ಬಿಜೆಪಿ 15 ಕ್ಷೇತ್ರಗಳಲ್ಲಿ ನಡೆಯುವ ಉಪ ಚುನಾವಣೆಯಲ್ಲಿ 6 ಸ್ಥಾನಗಳಲ್ಲಿ ಗೆಲುವು ಸಾಧಿಸಬೇಕಿದೆ. ಆರು ಸ್ಥಾನಗಳಲ್ಲಿ ಬಿಜೆಪಿ ಗೆದ್ದರೆ ಮಾತ್ರ ಯಡಿಯೂರಪ್ಪ ನೇತೃತ್ವದ ಸರ್ಕಾರ ಸುಗಮವಾಗಿ ಮೂರು ವರ್ಷ ಪೂರೈಸಲು ಸಾಧ್ಯ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.