ನೀನೇ ಸಾಕಿದಾ ಗಿಣಿ ಹದ್ದಾಗಿ ಕುಕ್ಕಿತಲ್ಲೋ...!

Published : Sep 23, 2019, 09:08 AM IST
ನೀನೇ ಸಾಕಿದಾ ಗಿಣಿ ಹದ್ದಾಗಿ ಕುಕ್ಕಿತಲ್ಲೋ...!

ಸಾರಾಂಶ

ನೀನೇ ಸಾಕಿದಾ ಗಿಣಿ ಹದ್ದಾಗಿ ಕುಕ್ಕಿತಲ್ಲೋ!| ಸಿದ್ದರಾಮಯ್ಯ ಬಗ್ಗೆ ರಮೇಶ್‌ ಕುಮಾರ್‌ ಅನುಕಂಪ

 ಬೆಂಗಳೂರು[ಸೆ.23]: ನೀನೇ ಸಾಕಿದಾ ಗಿಣಿ, ನಿನ್ನಾ ಮುದ್ದಿನಾ ಗಿಣಿ, ಹದ್ದಾಗಿ ಕುಕ್ಕಿತಲ್ಲೋ... ನಿನ್ನ ಹದ್ದಾಗಿ ಕುಕ್ಕಿತಲ್ಲೋ...

ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಅವರು ಪುಟ್ಟಣ್ಣ ಕಣಗಾಲ್‌ ನಿರ್ದೇಶನದ ‘ಮಾನಸ ಸರೋವರ’ ಚಿತ್ರದ ಈ ಹಾಡಿನ ತುಣುಕು ಹಾಡುವ ಮೂಲಕ ಮೈತ್ರಿ ಸರ್ಕಾರ ಪತನಕ್ಕೆ ಕಾರಣರಾಗಿ ಅನರ್ಹಗೊಂಡಿರುವ ಶಾಸಕರನ್ನು ಪರೋಕ್ಷವಾಗಿ ಹದ್ದಿಗೆ ಹೋಲಿಸಿ ಅಸಮಾಧಾನ ವ್ಯಕ್ತಪಡಿಸಿದರು. ನಗರದ ಸೆಂಟ್ರಲ್‌ ಕಾಲೇಜು ಆವರಣದಲ್ಲಿ ಭಾನುವಾರ ಆಯೋಜಿಸಲಾಗಿದ್ದ ಕಾ.ತ.ಚಿಕ್ಕಣ್ಣ ಸಂಪಾದಕತ್ವದ ‘ಸಿದ್ದರಾಮಯ್ಯ ಆಡಳಿತ -ಅಂತರಂಗ ಬಹಿರಂಗ’ ಗ್ರಂಥ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸಿದ್ದರಾಮಯ್ಯ ಅವರೇ ಸಾಕಿದ ಗಿಣಿಗಳು (ಅನರ್ಹ ಶಾಸಕರು) ಹದ್ದಾಗಿ ಕುಕ್ಕಿರುವ ಗುರುತುಗಳು ಇನ್ನೂ ಹಾಗೇ ಇವೆ. ಆ ಗುರುತುಗಳಿಗೆ ಡ್ರೆಸ್ಸಿಂಗ್‌ ಮಾಡಬೇಕಿದೆ ಎಂದು ವೇದಿಕೆಯಲ್ಲಿದ್ದ ಸಿದ್ದರಾಮಯ್ಯ ಕಡೆ ನೋಡಿಕೊಂಡೇ ಹೇಳಿದರು. ಅಲ್ಲದೆ, ಸಿದ್ದರಾಮಯ್ಯ ಅವರು ಚಾಮುಂಡೇಶ್ವರಿ ಕ್ಷೇತ್ರದಲ್ಲಾದ ಸೋಲನ್ನು ಒಂದು ಕೆಟ್ಟಕನಸು ಎಂದು ಮರೆಯಬೇಕು. ಅಸಂಘಟಿತರಾಗಿರುವ ತಮ್ಮ ಅಭಿಮಾನಿಗಳು, ಬೆಂಬಲಿಗರನ್ನು ಸಂಘಟಿಸಿಕೊಂಡು ಮುಂದಿನ ದಾರಿ ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಿಗೆ ಅಕ್ಟೋಬರ್ 21ರಂದು ಚುನಾವಣೆ ನಡೆಯಲಿದ್ದು, ಅ.24ಕ್ಕೆ ಮತ ಎಣಿಕೆ ಕಾರ್ಯ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ಘೋಷಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದಿನಕ್ಕೆರಡು ಬಾರಿ ಠಾಣೆಗೆ ಹಾಜರಾಗಲು ಸೂಚನೆ, ಆದೇಶ ಪ್ರಶ್ನಿಸಿದ ಆರೋಪಿಗೆ 1 ಲಕ್ಷ ರೂ ಪರಿಹಾರ
ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು