
ಕುಂದಗೋಳ[ಏ. 28] ಕುಂದಗೋಳ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಕಾರಣಕ್ಕೆ ಸಚಿವ ಸತೀಶ್ ಜಾರಕಿಹೊಳಿ ಕುಂದಗೋಳದಲ್ಲಿ ಕೈ ಮುಖಂಡರ ಸಭೆ ನಡೆಸಿದ್ದಾರೆ. ಕಾಂಗ್ರೆಸ್ ಟಿಕೆಟ್ ಹಂಚಿಕೆ ಬಗ್ಗೆ ಕಾರ್ಯಕರ್ತರಿಂದ ಆಕ್ಷೇಪ ಕೇಳಿ ಬಂದಿದೆ.
ಟಿಕೆಟ್ ಆಕಾಂಕ್ಷಿಯಾಗಿದ್ದ ಶಿವಾನಂದ ಬೆಂತೂರು ಬೆಂಬಲಿಗರು ಪ್ರತಿಭಟನೆ ನಡೆಸಿದ್ದು ಹೈಕಮಾಂಡ್ ಏಕಪಕ್ಷೀಯವಾಗಿ ನಿರ್ಧಾರ ತೆಗೆದುಕೊಂಡಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಚಿಂಚೋಳಿ,ಕುಂದಗೋಳ ಕ್ಷೇತ್ರಕ್ಕೆ ಅಧಿಕೃತ ಅಭ್ಯರ್ಥಿ ಪ್ರಕಟಿಸಿದ ಕಾಂಗ್ರೆಸ್
ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುವುದಾಗಿ ಶಿವಾನಂದ ಬೆಂತೂರು ಹೇಳಿದ್ದಾರೆ ಎನ್ನಲಾಗಿದೆ. ಕುಂದಗೋಳದಲ್ಲಿ ಕಾಂಗ್ರೆಸ್ ಮುಖಂಡರ ಜೊತೆ ಚರ್ಚಿಸದೆ ನಿರ್ಧಾರ ತೆಗೆದುಕೊಳ್ಳಲಾಗಿದೆ. ಜನಾಭಿಪ್ರಾಯ ಸಂಗ್ರಹಿಸದೆ ಶಿವಳ್ಳಿಯವರ ಪತ್ನಿ ಕುಸುಮಾ ಅವರಿಗೆ ಟಿಕೆಟ್ ಕೊಟ್ಟಿರುವುದು ಸರಿಯಲ್ಲ ಎಂಬ ಅಸಮಾಧಾನದ ಮಾತುಗಳು ಕಾರ್ಯಕರ್ತರ ವಲಯದಲ್ಲಿ ಕೇಳಿ ಬಂದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.