ಮತಪಟ್ಟಿಗೆ ಹೆಸರು ಸೇರಿಸಲು ಮೂರು ದಿನವಷ್ಟೇ ಅವಕಾಶ

Published : Oct 07, 2018, 10:37 AM IST
ಮತಪಟ್ಟಿಗೆ ಹೆಸರು ಸೇರಿಸಲು ಮೂರು ದಿನವಷ್ಟೇ  ಅವಕಾಶ

ಸಾರಾಂಶ

ರಾಜ್ಯದ 3 ಲೋಕಸಭಾ ಮತ್ತು ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಹಿನ್ನೆಲೆಯಲ್ಲಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಚುನಾವಣಾ ಆಯೋಗವು ಅ. 9 ರವರೆಗೆ ಕಾಲಾವಕಾಶ ನೀಡಿದೆ.

ಬೆಂಗಳೂರು : ರಾಜ್ಯದ 3 ಲೋಕಸಭಾ ಮತ್ತು ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಹಿನ್ನೆಲೆಯಲ್ಲಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಚುನಾವಣಾ ಆಯೋಗವು ಅ. 9 ರವರೆಗೆ ಕಾಲಾವಕಾಶ ನೀಡಿದೆ. ಉಪಚುನಾವಣೆ ಘೋಷಣೆಯಾದ ಬಳಿಕ ಶನಿವಾರ  ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ವಿವರಣೆ ನೀಡಿದ ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್, ಐದು ಕ್ಷೇತ್ರದಲ್ಲಿ ನೀತಿ ಸಂಹಿತೆ ಜಾರಿಯಾ ಗಿದೆ. ಈ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸು ತ್ತಿರುವ ಅಧಿಕಾರಿಗಳನ್ನು ರಾಜ್ಯ ಸರ್ಕಾರವು ವರ್ಗಾವಣೆ ಮಾಡುವಂತಿಲ್ಲ ಹಾಗೂ ಅವರ ಸಭೆ ನಡೆಸುವಂತಿಲ್ಲ ಎಂದು ಸ್ಪಷ್ಟವಾಗಿ ಹೇಳಿದರು.

ಮಂಡ್ಯ, ಶಿವಮೊಗ್ಗ, ಬಳ್ಳಾರಿ ಲೋಕಸಭಾ ಕ್ಷೇತ್ರ ಮತ್ತು ರಾಮನಗರ, ಜಮಖಂಡಿ ವಿಧಾನಸಭಾ ಕ್ಷೇತ್ರದ ಮತದಾರರು ಹೊಸದಾಗಿ ತಮ್ಮ ಹೆಸರು ಮತದಾರರ ಪಟ್ಟಿಗೆ ಹೆಸರು ಸೇರಿಸಬಹುದು. ಅ. 9 ರೊಳಗೆ ಹೆಸರು ಸೇರಿಸಲು ಕಾಲಾವಕಾಶ ನೀಡಲಾ ಗಿದೆ. ಬಳಿಕ ಸಲ್ಲಿಕೆಯಾಗುವ ಅರ್ಜಿ ಮಾನ್ಯ ಮಾಡು ವುದಿಲ್ಲ. ಅ. 9 ರಿಂದ ನಾಮಪತ್ರ ಸಲ್ಲಿಕೆ ಮಾಡಬಹುದಾಗಿದ್ದು, ಅ. 16 ರಂದು ನಾಮಪತ್ರ ಸಲ್ಲಿಕೆಗೆ ಕೊನೆ ದಿನ. ಅ. 17 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಅ. 20 ರಂದು  ನಾಮಪತ್ರಗಳನ್ನು ಹಿಂಪಡೆಯಲು ಕೊನೆಯ ದಿನವಾಗಿದೆ. ನ. 3 ರಂದುಮತದಾನ ನಡೆಯಲಿದ್ದು, ನ. 6ಕ್ಕೆ ಮತ ಎಣಿಕೆ ನಡೆಯಲಿದೆ ಎಂದು ವಿವರಿಸಿದರು. 

ಐದು ಕ್ಷೇತ್ರದಲ್ಲಿ ಮತದಾನಕ್ಕೆ ಇವಿಎಂ ಯಂತ್ರಗಳ ಜತೆಗೆ ವಿವಿಪ್ಯಾಟ್‌ಗಳನ್ನು ಬಳಸಲಾಗುತ್ತದೆ. ಒಟ್ಟು 34493 ಸಿಬ್ಬಂದಿಯನ್ನು ಚುನಾವಣಾ ಕಾರ್ಯಕ್ಕಾಗಿ ಬಳಸಿಕೊಳ್ಳಲಾಗುತ್ತಿದ್ದು, ತರಬೇತಿ ನೀಡಲಾಗುವುದು. ಒಟ್ಟು 6426 ಮತಗಟ್ಟೆಗಳನ್ನು ಸ್ಥಾಪಿಸಲಾಗುವುದು. ಚುನಾವಣೆಯಲ್ಲಿ 9680 ಬ್ಯಾಲೆಟ್ ಯೂನಿಟ್, 8066 ಕಂಟೋಲ್ ಯೂನಿಟ್ ಮತ್ತು 8391 ವಿವಿ ಪ್ಯಾಟ್‌ಗಳನ್ನು ಬಳಕೆ ಮಾಡಲಾಗುತ್ತಿದೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ 1,96,978 ಮತದಾರರಿದ್ದು, ಈ ಪೈಕಿ 820334 ಪುರುಷರು, 837429 ಮಹಿಳೆಯರು, 67 ಇತರರು ಇದ್ದಾರೆ. ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ 1,70,1050 ಮತದಾರರಿದ್ದಾರೆ.

ಇದರಲ್ಲಿ 831307 ಪುರುಷರು, 821203 ಮಹಿಳೆಯರು, 189 ಇತರರಿದ್ದಾರೆ. ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ 1722476 ಮತದಾರರಲ್ಲಿ 843210 ಪುರುಷರು, 845979 ಮಹಿಳೆಯರು, 72 ಇತರರು ಇದ್ದಾರೆ. ಜಮಖಂಡಿ ವಿಧಾನಸಭಾ ಕ್ಷೇತ್ರದಲ್ಲಿ 199339 ಮತದಾರರ ಪೈಕಿ 98387 ಪುರುಷರು, 97567 ಮಹಿಳೆಯರು, ಮೂವರು ಇತರರು ಮತ್ತು ರಾಮನಗರ ವಿಧಾನಸಭಾ ಕ್ಷೇತ್ರದಲ್ಲಿ 202599 ಮತದಾರರ ಪೈಕಿ 99558  ಪುರುಷರು, 100597 ಮಹಿಳೆಯರು, 24 ಇತರರು ಇದ್ದಾರೆ ಎಂದು ಮಾಹಿತಿ ನೀಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನೇತ್ರದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ಲಲಿತಮ್ಮ
ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?