ಉಪ ಚುನಾವಣೆಗೆ ಮುನಿರತ್ನ ವಿರುದ್ಧ ಗೌಡರ ಕುಟುಂಬದ ಸ್ಫರ್ಧಿ?

Published : Jul 26, 2019, 08:39 AM IST
ಉಪ ಚುನಾವಣೆಗೆ ಮುನಿರತ್ನ ವಿರುದ್ಧ ಗೌಡರ ಕುಟುಂಬದ ಸ್ಫರ್ಧಿ?

ಸಾರಾಂಶ

ಕರ್ನಾಟಕ ರಾಜಕೀಯದಲ್ಲಿ 15 ನಾಯಕರು ಅತೃಪ್ತರಾಗಿ ತೆರಳಿದ ಹಿನ್ನೆಲೆ ದೋಸ್ತಿ ಸರ್ಕಾರ ತನ್ನ ಅಧಿಕಾರ ಕಳೆದುಕೊಳ್ಳುವ ಸ್ಥಿತಿ ಬಂದೊದಗಿತು. ಇದೀಗ ರೆಬೆಲ್ ಗಳನ್ನು ಹಣಿಯಲು ದೋಸ್ತಿ ಪಾಳಯ ಸಕಲ ಸಿದ್ಧತೆ ನಡೆಸಿದ್ದು, ಈ ಕ್ಷೇತ್ರಗಳಿಗೆ ನಡೆಯುವ ಉಪಚುನಾವಣೆಯ ಸಿದ್ಧತೆಯಲ್ಲಿ ತೊಡಗಿದೆ.

ಬೆಂಗಳೂರು [ಜು.26]: ರಾಜರಾಜೇಶ್ವರಿ ನಗರ ಕ್ಷೇತ್ರದ ಶಾಸಕ ಮುನಿರತ್ನ ವಿರುದ್ಧ ಉಪಚುನಾವಣೆಯಲ್ಲಿ ಹಂಗಾಮಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್‌ ಕುಮಾರಸ್ವಾಮಿ ಅವರನ್ನು ಕಣಕ್ಕಿಳಿಸುವ ಕುರಿತು ಗಂಭೀರವಾಗಿ ಚರ್ಚೆ ನಡೆದಿದೆ. 

ಲೋಕಸಭೆಯಲ್ಲಿ ಸೋಲನುಭವಿಸಿದ ನಿಖಿಲ್‌ ಕುಮಾರಸ್ವಾಮಿ ಅವರನ್ನು ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ ನಿಲ್ಲಿಸಿ ಗೆಲ್ಲಿಸುವ ಮೂಲಕ ರಾಜಕೀಯ ಜೀವನಕ್ಕೆ ಹಾದಿ ಮಾಡಿಕೊಡುವ ಉದ್ದೇಶ ಇದೆ ಎಂದು ಹೇಳಲಾಗಿದೆ.

ಮಹಾಲಕ್ಷ್ಮೇ ಲೇಔಟ್‌ ಕ್ಷೇತ್ರದಲ್ಲಿ ತಮ್ಮದೇ ಪಕ್ಷದ ಶಾಸಕರಾಗಿರುವ ಗೋಪಾಲಯ್ಯ ಬೆನ್ನಿಗೆ ಚೂರಿ ಹಾಕಿರುವ ಭಾವನೆ ಪಕ್ಷದಲ್ಲಿದೆ. ಹೀಗಾಗಿ ಗೋಪಾಲಯ್ಯ ಅಥವಾ ಆತನ ಬೆಂಬಲಿಗರು ಯಾರೇ ಕಣಕ್ಕಿಳಿದರೂ ಸೋಲಿಸುವ ಮೂಲಕ ತಕ್ಕ ಪಾಠ ಕಲಿಸಲು ಜೆಡಿಎಸ್‌ ಪಣತೊಟ್ಟಿದೆ. ಈ ಹಿನ್ನೆಲೆಯಲ್ಲಿ ಈಗಿನಿಂದಲೇ ತಯಾರಿ ಆರಂಭಿಸಿದೆ ಎಂಬ ಮಾತುಗಳು ಕೇಳಿಬಂದಿವೆ. 

ಅಂತೆಯೇ ಯಶವಂತಪುರ ಕ್ಷೇತ್ರದ ಶಾಸಕ ಎಸ್‌.ಟಿ.ಸೋಮಶೇಖರ್‌ ಹಾಗೂ ಕೆ.ಆರ್‌.ಪುರ ಕ್ಷೇತ್ರದ ಬೈರತಿ ಬಸವರಾಜ್‌ ಸಹ ಸರ್ಕಾರ ಪತನಗೊಳ್ಳಲು ಪ್ರಮುಖ ಕಾರಣರಾಗಿದ್ದಾರೆ. ಕಾಂಗ್ರೆಸ್‌ನ ಮೈತ್ರಿಯೊಂದಿಗೆ ಚುನಾವಣೆ ಎದುರಿಸುವ ಬದಲು ಏಕಾಂಗಿಯಾಗಿ ಕಣಕ್ಕಿಳಿಯುವ ಉದ್ದೇಶದಿಂದ ಕ್ಷೇತ್ರದಲ್ಲಿ ತಳಮಟ್ಟದಿಂದ ಕೆಲಸ ಮಾಡಿ ನಾಲ್ವರು ಅತೃಪ್ತ ಶಾಸಕರಿಗೆ ತಿರುಗೇಟು ನೀಡುವ ತವಕದಲ್ಲಿದೆ. ಹೀಗಾಗಿ ಸಭೆ ನಡೆಸಿ ಪಕ್ಷವನ್ನು ಈಗಿನಿಂದಲೇ ಬಲಿಷ್ಠಗೊಳಿಸಲು ತಂತ್ರಗಾರಿಕೆಯನ್ನು ದೇವೇಗೌಡ ಅವರು ಹೆಣೆದಿದ್ದಾರೆ ಎಂದು ಹೇಳಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಭಾರತದ ಬೀಡಿಗೆ ಫಿದಾ ಆದ ರಷ್ಯನ್ನರು, ಒಂದು ಪ್ಯಾಕೆಟ್‌ ಇಷ್ಟು ದುಬಾರಿನಾ?
ರಾಜ್ಯದಲ್ಲಿ 2.84 ಲಕ್ಷ ಸರ್ಕಾರಿ ಹುದ್ದೆ ಖಾಲಿ: 24,300 ಹುದ್ದೆ ಭರ್ತಿಗೆ ಅಂಕಿತ! ಇಲಾಖಾವಾರು ಮಾಹಿತಿ ಇಲ್ಲಿದೆ!