
ಬೆಂಗಳೂರು : ಜೆಡಿಎಸ್ ಮತ್ತು ಕಾಂಗ್ರೆಸ್ ನೇತೃತ್ವದ ಸಮ್ಮಿಶ್ರ ಸರ್ಕಾರ ಮೊದಲ ಎರಡು ವರ್ಷ ಅಂದರೆ, ಇನ್ನೂ ಒಂದು ವರ್ಷ ಕಳೆದ ಮೇಲೆ ಎಲ್ಲ ಸಚಿವರನ್ನೂ ಬದಲಾಯಿಸಿ ಹೊಸಬರಿಗೆ ಅವಕಾಶ ನೀಡುವ ಬಗ್ಗೆ ಉಭಯ ಪಕ್ಷಗಳ ಹಿರಿಯ ನಾಯಕರ ನಡುವೆ ಚರ್ಚೆ ನಡೆದಿದೆ.
ಸರ್ಕಾರದ ಬುಡ ಗಟ್ಟಿಗೊಳಿಸುವ ಕುರಿತಂತೆ ಈ ಚರ್ಚೆ ನಡೆದಿದ್ದು, ಕಾಂಗ್ರೆಸ್ ಪಕ್ಷ ತನ್ನಲ್ಲಿನ ಅತೃಪ್ತ ಶಾಸಕರನ್ನು ಸಮಾಧಾನಪಡಿಸುವ ಉದ್ದೇಶದಿಂದ ಇಂಥದೊಂದು ಪ್ರಸ್ತಾಪವನ್ನು ಜೆಡಿಎಸ್ ಮುಂದಿಟ್ಟಿದೆ. ಇದಕ್ಕೆ ಜೆಡಿಎಸ್ ಕೂಡ ಸಹಮತ ಸೂಚಿಸಿದ್ದರೂ, ಎರಡು ವರ್ಷ ಕಳೆದ ಬಳಿಕ ತನ್ನ ಪಕ್ಷದ ಸಚಿವರೆಲ್ಲರನ್ನೂ ಕೈಬಿಟ್ಟು ಹೊಸಬರಿಗೆ ಅವಕಾಶ ನೀಡುವ ಬಗ್ಗೆ ಏನನ್ನೂ ಹೇಳಿಲ್ಲ ಎನ್ನಲಾಗಿದೆ.
ಸದ್ಯ ಅಸಮಾಧಾನ ತಲೆದೋರಿರುವುದು ಕಾಂಗ್ರೆಸ್ ಪಕ್ಷದಲ್ಲಿ. ಸರ್ಕಾರ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಶಾಸಕರ ಅತೃಪ್ತಿ ಕಡಮೆಗೊಳಿಸಲು ಆ ಪಕ್ಷ ಏನು ಬೇಕಾದರೂ ನಿರ್ಧಾರ ಕೈಗೊಳ್ಳಲಿ. ಅದಕ್ಕೆ ನಮ್ಮ ಅಭ್ಯಂತರವೇನೂ ಇಲ್ಲ. ಆದರೆ, ನಮ್ಮ ಪಕ್ಷದಲ್ಲಿ ಅಸಮಾಧಾನವಿಲ್ಲ. ಹೀಗಾಗಿ, ನಮ್ಮ ಸಚಿವರ ಪೈಕಿ ಯಾರನ್ನು ಕೈಬಿಡಬೇಕು ಎಂಬುದರ ಬಗ್ಗೆ ಯಾವುದೇ ನಿರ್ಧಾರ ಕೈಗೊಳ್ಳುವುದು ನಮಗೆ ಬಿಟ್ಟವಿಚಾರ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.