
ಬೆಂಗಳೂರು : ಇದೇ ಡಿಸೆಂಬರ್ 22ಕ್ಕೆ ಕರ್ನಾಟಕ ಸಚಿವ ಸಂಪುಟ ವಿಸ್ತರಣೆಗೆ ಫಿಕ್ಸ್ ಆಗಿದ್ದ ಮುಹೂರ್ತ ಮತ್ತೆ ಮುಂದಕ್ಕೆ ಹೋಗುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ಅಸಮಾಧಾನಗೊಂಡ ಶಾಸಕರನ್ನು ಸಮಾಧಾನಪಡಿಸಲು ಕೈ ನಾಯಕರು ಮಾಸ್ಟರ್ ಪ್ಲಾನ್ ಮಾಡಿದ್ದಾರೆ.
ಶೀಘ್ರದಲ್ಲೇ ಲೋಕಸಭಾ ಚುನಾವಣೆ ಇದ್ದು, ಈ ಸಂದರ್ಭದಲ್ಲಿ ಸಂಪುಟ ವಿಸ್ತರಣೆ ಕಷ್ಟವಾಗಲಿದ್ದು, ಚುನಾವಣೆ ಬಳಿಕ ಸಂಪುಟ ಪುನಾರಚನೆ ಮಾಡುತ್ತೇವೆ. ಎಲ್ಲರಿಗೂ ಅವಕಾಶ ನೀಡುತ್ತೇವೆ ಎಂದು ಭರವಸೆ ನೀಡುತ್ತಿದ್ದಾರೆ. ಸಂಪುಟ ವಿಸ್ತರಣೆ ಮಾಡಿದರೆ ಹೆಚ್ವಿನ ಶಾಸಕರಿಗೆ ಅವಕಾಶ ನೀಡುವುದು ಕಷ್ಟವಾಗಲಿದ್ದು, 10 ರಿಂದ 12 ಜನರಿಗೆ ಮಾತ್ರವೇ ಅವಕಾಶ ಮಾಡಿಕೊಡಬಹುದಾಗಿದೆ. ಈ ನಿಟ್ಟಿನಲ್ಲಿ ಮುಂದೂಡಿಕೆ ಬಗ್ಗೆ ಚರ್ಚೆಗಳು ನಡೆಯುತ್ತಿದೆ.
ಇನ್ನು ಸರ್ಕಾರ ರಚನೆಯಾಗಿ 6 ತಿಂಗಳಾದ ಬಳಿಕ ಸಚಿವರ ಮೌಲ್ಯಮಾಪನ ಮಾಡಲು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸೂಚಿಸಿದ್ದು, ಅದರಂತೆ ಕೆ.ಸಿ ವೇಣುಗೋಪಾಲ್ ಸಚಿವರ ಮೌಲ್ಯಮಾಪನ ಮಾಡಲಿದ್ದಾರೆ. ಈ ವೇಳೆ ಯಾವ ಸಚಿವರ ಕಾರ್ಯ ತೃಪ್ತಿಕರವಾಗಿಲ್ಲವೋ ಅಂತವರನ್ನು ಸಂಪುಟದಿಂದ ಕೈ ಬಿಡಲಾಗುತ್ತದೆ. ಇರುವ 6 ಸ್ಥಾನಗಳನ್ನು ಚುನಾವಣೆ ಬಳಿಕ ತುಂಬಿಕೊಳ್ಳಲಾಗುತ್ತದೆ ಎಂದು ಸಚಿವ ಸ್ಥಾನಾಕಾಂಕ್ಷಿಗಳಿಗೆ ಕೈ ನಾಯಕರು ಭರವಸೆ ನೀಡಿದ್ದಾರೆ.
ಅತೃಪ್ತರ ಭೇಟಿ ಮಾಡಿ ಚರ್ಚೆ : ಈಗಾಗಲೇ ಉಪಮುಖ್ಯಮಂತ್ರಿ ಪರಮೇಶ್ವರ್ ಹಾಗೂ ಕೆಪಿಸಿಸಿ ಅಧ್ಯಕ್ಷ ಗುಂಡೂರಾವ್ ಅತೃಪ್ತರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.
ಸದ್ಯ ಸಂಪುಟದಲ್ಲಿರುವ ಜಯಮಾಲಾ, ಆರ್.ವಿ ದೇಶಪಾಂಡೆ, ಆರ್ ಶಂಕರ್, ರಮೇಶ್ ಜಾರಕಿಹೊಳಿ ಸೇರಿದಂತೆ ಐವರು ಸಚಿವರ ಮೇಲೆ ಕೈ ನಾಯಕರ ಅಸಮಾಧಾನವಿದ್ದು, ರಮೇಶ್ ಜಾರಕಿಹೊಳಿ ಸಂಪುಟದಿಂದ ಕೆಳಗಿಳಿಸಿ ಬೆಳಗಾವಿ ಲೋಕಸಭೆಗೆ ನಿಲ್ಲಿಸಲು ಪ್ಲಾನ್ ಮಾಡಲಾಗುತ್ತಿದೆ.
ರಮೇಶ್ ಬದಲು ಸತೀಶ್ ಜಾರಕಿ ಹೊಳಿಗೆ ಸಚಿವ ಸ್ಥಾನ ನೀಡಿ, ಜಾರಕಿಹೊಳಿ ಬ್ರದರ್ಸ್ ಜೊತೆ ಇರುವ ಶಾಸಕರನ್ನ ಹಿಡಿದಿಟ್ಟುಕೊಳ್ಳುವ ಪ್ಲಾನ್ ಮಾಡಲಾಗುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.