ಡಿ.9ರ ಬದಲು 22, ಸಂಪುಟ ವಿಸ್ತರಣೆ ಸತ್ಯ ಹೇಳಿದ ಮಾಜಿ ಸಿಎಂ

By Web DeskFirst Published Dec 5, 2018, 8:33 PM IST
Highlights

ಅಂತೂ ಇಂತೂ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕಾಲ ಕೂಡಿ ಬಂದಿದೆ. ಡಿಸೆಂಬರ್ 22ಕ್ಕೆ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ದೋಸ್ತಿ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ತಿಳಿಸಿದ್ದಾರೆ.  ನಿಗದಿಯಂತೆ ಡಿಸೆಂಬರ್ 9ಕ್ಕೆ ಸಂಪುಟ ವಿಸ್ತರಣೆ ಮಾಡಬೇಕಾಗಿತ್ತು ಆದರೆ ಅದನ್ನು ಡಿಸೆಂಬರ್ 22 ಕ್ಕೆ ಮುಂದಕ್ಕೆ ಹಾಕಲಾಗಿದೆ. ಹಾಗಾದರೆ ಇದಕ್ಕೆ ಏನು ಕಾರಣ?

ಬೆಂಗಳೂರು[ಡಿ.05]  ರಾಜ್ಯ ಸಚಿವ ಸಂಪುಟ ವಿಸ್ತರಣೆ ಡಿಸೆಂಬರ್‌ 22ಕ್ಕೆ  ಆಗಲಿದೆ ಎಂದು ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬುಧವಾರ ಸಂಜೆ ನಡೆದ ಸಮನ್ವಯ ಸಮಿತಿ ಸಭೆ ಬಳಿಕ ಮಾಧ್ಯಮಗಳಿಗೆ ವಿವರ ನೀಡಿದರು. ನಿಮಗೆ ನಿಜ ಹೇಳಬೇಕು ಎಂದರೆ ಡಿಸೆಂಬರ್ 9 ರಂದೇ ಸಂಪುಟ ವಿಸ್ತರಣೆ ಆಗಬೇಕಾಗಿತ್ತು.. ಆದರೆ ಡಿಸೆಂಬರ್‌ ಮರುದಿನ ಅಂದರೆ ಡಿಸೆಂಬರ್ 10 ರಂದು ಬೆಳಗಾವಿ ಅಧಿವೇಶನ ಆರಂಭವಾಗುವ ಕಾರಣಕ್ಕೆ ಮುಂದಕ್ಕೆ ಹಾಕಿದ್ದೇವೆ ಎಂದು ತಿಳಿಸಿದರು.

ಸಂಪುಟದಲ್ಲಿ ಒಟ್ಟು 8 ಸ್ಥಾನಗಳು ಖಾಲಿ ಇವೆ. ಇದರಲ್ಲಿ 6 ಸ್ಥಾನ ಕಾಂಗ್ರೆಸ್ ಪಾಲಿನದ್ದಾಗಿದ್ದರೆ ಇನ್ನುಳಿದ ಎರಡು ಸ್ಥಾನ ಜೆಡಿಎಸ್‌ಗೆ ಸೇರಿದ್ದು. ಜೆಡಿಎಸ್‌ನಲ್ಲಿ ಯಾವುದೇ ಸಮಸ್ಯೆ ಇಲ್ಲವಾದರೂ ಕಾಂಗ್ರೆಸ್‌ನಲ್ಲಿ 6 ಸ್ಥಾನಗಳಿಗೆ ಪೈಪೋಟಿ ಇದೆ. ರಾಮಲಿಂಗಾರೆಡ್ಡಿ, ಎಂಬಿ ಪಾಟೀಲ್, ಬಿಸಿ ಪಾಟೀಲ್, ಡಾ.ಸುಧಾಕರ, ಎಂಟಿಬಿ ನಾಗರಾಜ್, ಆನಂದ್ ಸಿಂಗ್ ಸೇರಿದಂತೆ ಅನೇಕರು ಈ ಬಾರಿ ಸಚಿವ ಸ್ಥಾನದ ಆಸೆಯಲ್ಲಿದ್ದಾರೆ.

click me!