ಕೊನೆಗೂ ಮೈತ್ರಿ ಸರ್ಕಾರದ ಸಚಿವ ಸಂಪುಟ ವಿಸ್ತರಣೆಗೆ ಕಾಂಗ್ರೆಸ್ ಮುಂದಾಗಿದೆ. ಯಾವಾಗ ವಿಸ್ತರಣೆಯಾಗಲಿದೆ ಎನ್ನುವ ವಿವರ ಇಲ್ಲಿದೆ.
ಚಿಕ್ಕಮಗಳೂರು, (ಆ.15) : ರಾಜ್ಯ ಸಚಿವ ಸಂಪುಟ ವಿಸ್ತರಣೆ ಹಾಗೂ ನಿಗಮ-ಮಂಡಳಿಗಳ ನೇಮಕಾತಿ ಬರುವ ನವೆಂಬರ್ 5 ರಿಂದ 10೦ರೊಳಗೆ ನಡೆಯಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾ ಡಿದ ಅವರು, ರಾಜ್ಯದಲ್ಲಿ ಉಪ ಚುನಾವಣೆ ನಡೆಯು ತ್ತಿದ್ದು, ಇದು ಮುಗಿಯುತ್ತಿದ್ದಂತೆ ಸಂಪುಟ ವಿಸ್ತರಣೆ ಹಾಗೂ ನಿಗಮ- ಮಂಡಳಿಗಳಿಗೆ ನೇಮಕಾತಿ ನಡೆಯಲಿದೆ ಎಂದು ಹೇಳಿದರು.
ಬಳ್ಳಾರಿ ಲೋಕಸಭಾ ಉಪ ಚುನಾ ವಣೆಗೆ ಕಾಂಗ್ರೆಸ್‌ನಿಂದ ಸ್ಪರ್ಧೆ ಮಾಡುವ ಅಭ್ಯರ್ಥಿಗಳ ಪಟ್ಟಿಯಲ್ಲಿ ಇಬ್ಬರ ಹೆಸರಿದ್ದು, ಇವರಲ್ಲಿ ಒಬ್ಬರ ಹೆಸರು ಸೋಮವಾರ ಅಂತಿಮಗೊಳ್ಳಲಿದೆ ಎಂದು ತಿಳಿಸಿದರು
ಇನ್ನು ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ಮೊನ್ನೇ ಅಷ್ಟೇ ಬೆಂಗಳೂರಿಗೆ ಬಂದಿದ್ದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಸಂಪುಟ ವಿಸ್ತರಣೆ ಬಗ್ಗೆ ಮಾತುಕತೆ ನಡೆಸಿ ಅನುಮತಿ ಪಡೆದುಕೊಂಡಿದ್ದರು.