ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್

Published : Aug 12, 2019, 11:16 AM ISTUpdated : Aug 12, 2019, 11:18 AM IST
ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್

ಸಾರಾಂಶ

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದು ಒಂದು ತಿಂಗಳಾಗುತ್ತಾ ಬಂದರೂ ಸಂಪುಟ ವಿಸ್ತರಣೆಯಾಗಿರಲಿಲ್ಲ.  ಆದರೆ ಇದೇ 14 ರಂದು ಸಂಪುಟ ವಿಸ್ತರಣೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. 

ಬೆಂಗಳೂರು [ಆ.12]: ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆಗೆ ರಾಜ್ಯ ಸರ್ಕಾರ ಸಜ್ಜಾಗಿದೆ. ಬಿಜೆಪಿ ಅಧ್ಯಕ್ಷ ಅಮಿತ್ ಶಾ ರಾಜ್ಯಕ್ಕೆ ಆಗಮಿಸಿ ವಾಪಸಾದ ಬೆನ್ನಲ್ಲೇ ರಾಜ್ಯ ಮುಖಂಡರು ಸಂಪುಟ ರಚನೆಗೆ ಮುಂದಾಗಿದ್ದಾರೆ. 

ಇದೇ ಆಗಸ್ಟ್ 14 ರಂದು ಬುಧವಾರ ರಾಜ್ಯ ಸಚಿವ ವಿಸ್ತರಣೆ ಯಾಗುವ ಸಾಧ್ಯತೆ ಹೆಚ್ಚಿದೆ. ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನಾಚರಣೆ ಇರುವ ಹಿನ್ನೆಲೆಯಲ್ಲಿ ಸಚಿವರು ಈ ಸಂದರ್ಭದಲ್ಲಿ ಇರಬೇಕಾದ ಹಿನ್ನೆಲೆಯಲ್ಲಿ ಸಂಪುಟ ವಿಸ್ತರಣೆ ಮಾಡುವ ಸಾಧ್ಯತೆ ಹೆಚ್ಚಿದೆ.

ಸಂಪುಟ ರಚನೆಗೆ ಕಾಲ ಕೂಡಿಬಂತು: ಝಂಡಾ ಹಾರಿಸಿ ಯಡಿಯೂರಪ್ಪ ದೆಹಲಿಗೆ

ಇನ್ನು ಸಂಪುಟ ವಿಸ್ತರಣೆಯಾದ ಬಳಿಕ ಮುಖ್ಯಮಂತ್ರಿ ಯಡಿಯೂರಪ್ಪ 16ರಂದು ದೆಹಲಿಗೆ ತೆರಳಿ ಪಕ್ಷದ ವರಿಷ್ಠರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ. 

ರಾಜ್ಯದಲ್ಲಿ ದೋಸ್ತಿ ಸರ್ಕಾರ ಉರುಳಿ, ಬಿಜೆಪಿ ಸರ್ಕಾರ ರಚನೆ ಮಾಡಿ ಒಂದು ತಿಂಗಳಾಗುತ್ತಾ ಬಂದರೂ ಕೂಡ ಸಂಪುಟ ವಿಸ್ತರಣೆಗೆ ಮುಹೂರ್ತ ಕೂಡಿ ಬಂದಿರಲಿಲ್ಲ. ಆದರೆ ಇದೇ ನಾಯಕರು ಸಚಿವ ಸಂಪುಟ ವಿಸ್ತರಣೆ ಮಾಡಲು ಮನಸ್ಸು ಮಾಡಿದ್ದಾರೆ ಎನ್ನಲಾಗಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗುಜರಾತ್‌ನಲ್ಲೊಂದು ನಿರ್ಭಯಾ ಪ್ರಕರಣ
ಶಾಲಾ-ಕಾಲೇಜು ಹುಡುಗಿಯರಿಗೂ ಋತುಚಕ್ರ ರಜೆ?: ಸಂಪುಟ ಸಭೆಯಲ್ಲಿ ಕಾಯ್ದೆಗೆ ಅನುಮೋದನೆ ಸಾಧ್ಯತೆ