ರೈತರ ಸಾಲಮನ್ನಾ- ಕೊಟ್ಟ ಮಾತಿಗೆ ತಪ್ಪಲಾರೆ ಎಂದರು ಮುಖ್ಯಮಂತ್ರಿ

First Published May 17, 2018, 12:16 PM IST
Highlights

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಿ.ಎಸ್.ಯಡಿಯೂರಪ್ಪ ಅವರು ಕೊಟ್ಟ ಮಾತಿನಂತೆ ರೈತರ, ನೇಕಾರರ ಸಾಲ ಮನ್ನಾ ಮಾಡುವ ಭರವಸೆ ನೀಡಿದ್ದಾರೆ.

ಬೆಂಗಳೂರು (ಡಿ.17): ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಬಿ.ಎಸ್.ಯಡಿಯೂರಪ್ಪ ಮೊದಲ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದು,  ಕೊಟ್ಟ ಮಾತಿನಂತೆ ರೈತರ, ನೇಕಾರರ ಸಾಲ ಮನ್ನಾ ಮಾಡುವ ಭರವಸೆ ನೀಡಿದ್ದಾರೆ.

ಚುನಾವಣೆಗೂ ಮುನ್ನ ಘೋಷಿಸಿದಂತೆ ಅಧಿಕಾರ ಸ್ವೀಕರಿಸಿದ 24 ಗಂಟೆಯೊಳಗೆ ಯಡಿಯೂರಪ್ಪ ರಾಷ್ಟ್ರೀಕೃತ, ಸಹಕಾರಿ ಬ್ಯಾಂಕ್‌ಗಳಲ್ಲಿನ ಸಾಲ ಮನ್ನಾ ಮಾಡುತ್ತಾರೆಂಬ ನಿರೀಕ್ಷೆಯಿತ್ತು. ಆದರೆ, ಈ ಬಗ್ಗೆ ಇನ್ನೆರಡು ದಿನಗಳಲ್ಲಿ ಮುಖ್ಯ ಕಾರ್ಯದರ್ಶಿಯೊಂದಿಗೆ ಮಾತನಾಡಿ ಅಂತಿಮ ನಿರ್ಧಾರ ತೆಗೆದುಕೊಳ್ಳುವೆ, ಎಂದು ಹೇಳಿದ್ದಾರೆ.

 

ಕರ್ನಾಟಕದ ಮುಖ್ಯಮಂತ್ರಿಯಾಗಿ ರೈತರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ್ದೇನೆ. ನೀವು ನಮ್ಮ ಮೇಲೆ ವಿಶ್ವಾಸವಿಟ್ಟು ಮತ ಚಲಾಯಿಸಿದ್ದರಿಂದ ಇದು ಸಾಧ್ಯವಾಗಿದೆ. ರಾಜ್ಯವು ಪ್ರಗತಿಪಥದಲ್ಲಿ ಸಾಗಬೇಕೆಂಬ ನಿಮ್ಮ ಆಕಾಂಕ್ಷೆಯನ್ನು ನಿಜ ಮಾಡುವುದು ನಮ್ಮ ಹೊಣೆ. ಎಂದಿನಂತೆ ನಮ್ಮ ಜೊತೆಗಿರಿ. ನಿಮ್ಮ ಕನಸುಗಳನ್ನು ನನಸಾಗಿಸುತ್ತೇವೆ. ಧನ್ಯವಾದಗಳು. pic.twitter.com/js75wQpnsD

— B.S. Yeddyurappa (@BSYBJP)

 

ಪ್ರಮಾಣ ವಚನ ಸ್ವೀಕರಿಸಿದ ನಂತರ ನಡೆಸುವ ಮೊದಲ ಸುದ್ದಿಗೋಷ್ಠಿಯಲ್ಲಿಯೇ ರೈತರ ಸಾಲ ಮನ್ನಾ ಮಾಡುತ್ತಾರೆಂಬ ನೀರಿಕ್ಷೆಯಿತ್ತು. 

ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ನಡೆಸಿದ ಮೊದಲ ಸುದ್ದಿ ಗೋಷ್ಠಿಯಲ್ಲಿಯೇ ಅನ್ನ ಭಾಗ್ಯ ಯೋಜನೆಯನ್ನು ಘೋಷಿಸಿ, ಜನರ ಮೆಚ್ಚುಗೆಗೆ ಪಾತ್ರರಾಗಿದ್ದರು.

ಕಾಂಗ್ರೆಸ್-ಜೆಡಿಎಸ್ ಒಂದಾದರೆ ಬಿಜೆಪಿಗೆ ನಷ್ಟ

ರಾಜ್ಯಪಾಲರ ಭರವಸೆ
 

ಸಿದ್ದರಾಮಯ್ಯ ನೇತೃತ್ವದಲ್ಲಿ ಪ್ರತಿಭಟನೆ

 

click me!