ಬಿಜೆಪಿಯಿಂದ ಮಂತ್ರಿ ಸ್ಥಾನ : ಅಚ್ಚರಿ ಹೆಸರುಗಳಿಗೆ ಕೊಕ್‌ ಸಾಧ್ಯತೆ?

Published : Jul 30, 2019, 10:18 AM IST
ಬಿಜೆಪಿಯಿಂದ ಮಂತ್ರಿ ಸ್ಥಾನ : ಅಚ್ಚರಿ ಹೆಸರುಗಳಿಗೆ ಕೊಕ್‌ ಸಾಧ್ಯತೆ?

ಸಾರಾಂಶ

ವಿಶ್ವಾಸಮತ ಯಾಚನೆಯಲ್ಲಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಜಯಗಳಿಸಿದೆ. ಇದೀಗ ಸಂಪುಟ ವಿಸ್ತರಣೆಯತ್ತ ಗಮನ ಹರಿಸಿದ್ದು, ಪ್ರಮುಖರೇ ಸಚಿವ ಸ್ಥಾನ ತ್ಯಾಗ ಮಾಡಬೇಕಾದ ಸ್ಥಿತಿ ಬಂದೊದಗುವ ಸಾಧ್ಯತೆ ಇದೆ. 

ಬೆಂಗಳೂರು [ಜು.30]: ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಅನರ್ಹಗೊಂಡಿರುವವರಿಗೆ ಹೆಚ್ಚಿನ ಸಚಿವ ಸ್ಥಾನ ನೀಡಬೇಕಾಗಿರುವುದರಿಂದ ಬಿಜೆಪಿಯಲ್ಲಿ ಈಗ ಕೇಳಿಬರುತ್ತಿರುವ ಸಚಿವ ಸ್ಥಾನದ ಹಲವು ಅಚ್ಚರಿಯ ಹೆಸರುಗಳಿಗೆ ಕೊಕ್‌ ನೀಡುವ ಸಾಧ್ಯತೆಯೂ ಇದೆ. 

ಈ ಬಗ್ಗೆ ಪಕ್ಷದ ಆಂತರಿಕ ಸಭೆಗಳಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಪ್ರಸ್ತಾಪಿಸಿದ್ದು, ಸರ್ಕಾರದ ಉಳಿವಿಗಾಗಿ ಪ್ರಮುಖರು ತ್ಯಾಗ ಮಾಡಬೇಕಾಗಿ ಬರಬಹುದು. 

ಎಲ್ಲ ಸಚಿವ ಸ್ಥಾನದ ಆಕಾಂಕ್ಷಿಗಳಿಗೂ ಅವಕಾಶ ಕಲ್ಪಿಸುವುದು ಕಷ್ಟವಾಗುತ್ತದೆ. ಅಂತಿಮವಾಗಿ ಸರ್ಕಾರ ಸುಭದ್ರವಾಗಿರಬೇಕು ಎಂಬ ಉದ್ದೇಶದಿಂದ ಈಗ ಕೇಳಿಬರುತ್ತಿರುವ ಹಲವು ಪ್ರಮುಖರ ಹೆಸರುಗಳು ಸಚಿವ ಸ್ಥಾನದ ಪಟ್ಟಿಯಿಂದ ಕೈಬಿಟ್ಟರೂ ಬೇಸರ ಮಾಡಿಕೊಳ್ಳಬೇಡಿ ಎಂದು ಯಡಿಯೂರಪ್ಪ ಮನವಿ ಮಾಡಿದ್ದಾರೆ ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸೌಟು, ಕುಕ್ಕರ್ ಹಿಡಿದು ನಿಲ್ಲಿ, SIR ವಿರುದ್ಧ ಹೋರಾಟಕ್ಕೆ ಮಹಿಳೆಯರಿಗೆ ಸಿಎಂ ಮಮತಾ ಬ್ಯಾನರ್ಜಿ ಕರೆ
ಮೈಸೂರು ಅರಮನೆ ವರಹ ದ್ವಾರದ ಮೇಲ್ಛಾವಣಿ ಕುಸಿತ; ಪ್ರವಾಸಿಗರ ಗೈರಿನಿಂದ ತಪ್ಪಿದ ಭಾರೀ ಅನಾಹುತ