
ಬೆಂಗಳೂರು[ಜು.15] ಅಮೆರಿಕದಲ್ಲಿ ಆಗಸ್ಟ್ 31ರಿಂದ ಸೆಪ್ಟೆಂಬರ್ 2ರವರೆಗೆ ನಡೆಯಲಿರುವ ಅಮೆರಿk ಕನ್ನಡ ಕೂಟಗಳ ಆಗರ [ಅಕ್ಕ] ಸಮ್ಮೇಳನವನ್ನು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಉದ್ಘಾಟಿಸಲಿದ್ದಾರೆ.
ಅಕ್ಕ ಸಂಘಟನೆಯ ಸಂಸ್ಥಾಪಕರಾದ ಅಮರನಾಥ ಗೌಡ ಮತ್ತು ಅಧ್ಯಕ್ಷ ಶಿವಮೂರ್ತಿ ಸಿಎಂಗೆ ಆಹ್ವಾನ ನೀಡಿದ್ದಾರೆ. ಅಲ್ಲದೇ ಅಕ್ಕ ಸಮ್ಮೇಳನಕ್ಕೆ ಹೆಚ್ಚಿನ ಅನುದಾನಕ್ಕೂ ಆಯೋಜಕರು ಮನವಿ ಮಾಡಿದ್ದಾರೆ.
ಎಲ್ಲಾದರೂ ಇರು ಎಂಥಾದರೂ ಇರು ಎಂದೆಂದಿಗೂ ನೀ ಕನ್ನಡವಾಗಿರು. ಎಂಬ ರಾಷ್ಟ್ರಕವಿ ಕುವೆಂಪು ಅವರ ಆದರ್ಶಪೂರ್ವ ಕವಿತೆಯಂತೆ ಸಪ್ತಸಾಗರದಾಚಿನ ಅಮೆರಿಕದಲ್ಲಿ ನೆಲೆಸಿರುವ ಕನ್ನಡಿಗರ ಕೂಟ ಅಕ್ಕ ಸಂಘಟನೆ ವಿಶ್ವಕನ್ನಡ ಸಮ್ಮೇಳನಕ್ಕೆ ಸಿದ್ಧತೆ ಆರಂಭಿಸಿದೆ. ದಶಮಾನೋತ್ಸವ ಸಂಭ್ರಮವನ್ನು ವಿಶಿಷ್ಟವಾಗಿ ಆಚರಿಸಲು ನಿರ್ಧರಿಸಲಾಗಿದ್ದು, ಕನ್ನಡಿಗರ ಹಿರಿಮೆ, ಕಲೆ, ಸಾಹಿತ್ಯ, ಗ್ರಾಮೀಣ ಸೊಗಡನ್ನು ಬಿಂಬಿಸಲಾಗುತ್ತದೆ.
ಪ್ರತಿ ಎರಡು ವರ್ಷಕ್ಕೊಮ್ಮೆ ನಡೆಯುವ ಅಕ್ಕ ಸಮ್ಮೇಳನಕ್ಕೆ ಈ ಬಾರಿ ಹೊಸ ಧ್ಯೇಯ ವಾಕ್ಯವನ್ನು ಕೂಡ ರೂಪಿಸಲಾಗಿದ್ದು, "ಅಕ್ಕರೆಯ ಹತ್ತರ ಸಾರ್ಥಕ ಹೊತ್ತು" ಎಂಬ ಘೋಷ ವಾಕ್ಯದಡಿ ಕನ್ನಡ ಹಬ್ಬವನ್ನು ಆಚರಿಸಲಾಗುತ್ತಿದೆ.
ಅಮೆರಿಕದ ಟೆಕ್ಸಾಸ್‍ನ ಡಲ್ಲಾಸ್ ನಗರದಲ್ಲಿ ಈ ಬಾರಿ 10ನೇ ವಿಶ್ವ ಅಕ್ಕ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ.ಅಕ್ಕ ಸಂಘಟನೆ ಪ್ರಾರಂಭಗೊಂಡು 20 ವರ್ಷ ಪೂರೈಸುತ್ತಿದ್ದು ಡಲ್ಲಾಸ್ ನಗರದ ಶೆರಟನ್ ಕನ್ವೆನ್ ಷನ್ ಸೆಂಟರ್ ನಲ್ಲಿ ಮೂರು ದಿನಗಳ ಕಾಲ ಸಮ್ಮೇಳನ ನಡೆಯಲಿದೆ.
ನಿಮಗಿದೋ ಆಹ್ವಾನ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.