ನಿರುದ್ಯೋಗ ನಿವಾರಣೆಗೆ ಸಿಎಂ ಕುಮಾರಸ್ವಾಮಿ ಹೊಸ ಪ್ಲಾನ್

First Published Jun 8, 2018, 9:01 AM IST
Highlights

ನಿರುದ್ಯೋಗ ಸಮಸ್ಯೆ ನಿವಾರಣೆಗಾಗಿ ತಿಂಗಳಲ್ಲಿ ಒಂದು ದಿನ ಮಿನಿ ಉದ್ಯೋಗ ಮೇಳ ನಡೆಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. 

ಬೆಂಗಳೂರು : ನಿರುದ್ಯೋಗ ಸಮಸ್ಯೆ ನಿವಾರಣೆಗಾಗಿ ತಿಂಗಳಲ್ಲಿ ಒಂದು ದಿನ ಮಿನಿ ಉದ್ಯೋಗ ಮೇಳ ನಡೆಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. 

ವಿಧಾನಸೌಧದಲ್ಲಿ ಗುರುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಯುವಕರು ಉದ್ಯೋಗ ಸಿಗದೆ ಕಷ್ಟ ಪಡುತ್ತಿರುವ ಬಗ್ಗೆ ಮಾಹಿತಿ ಇದೆ. ಹೀಗಾಗಿ ಉದ್ಯೋಗಕ್ಕಾಗಿ ಹುಡುಕಾಟ ನಡೆಸುವವರಿಗೆ ಅವಕಾಶ ನೀಡುವ ಸಲುವಾಗಿ ಒಂದು ವೇದಿಕೆ ಒದಗಿಸಲು ಸಿದ್ಧತೆ ನಡೆಸಿದ್ದೇನೆ. ನಿರುದ್ಯೋಗ ಸಮಸ್ಯೆ ನಿವಾರಣೆಗಾಗಿ ತಿಂಗಳಲ್ಲಿ ಒಂದು ದಿನ ಮಿನಿ ಉದ್ಯೋಗ ಮೇಳ ನಡೆಸುವ ಉದ್ದೇಶ ಹೊಂದಲಾಗಿದೆ ಎಂದು ಹೇಳಿದರು. 

ಜನತಾ ದರ್ಶನದಲ್ಲಿ ಪ್ರಮುಖವಾಗಿ ಉದ್ಯೋಗ ಸಮಸ್ಯೆ, ಶೈಕ್ಷಣಿಕ ಸಮಸ್ಯೆಗಳು ಸಾಕಷ್ಟು ಕಂಡುಬಂದಿವೆ. ಈ ನಿಟ್ಟಿನಲ್ಲಿ ಅವರಿಗೆ ನೆರವು ನೀಡುವ ಸಂಬಂಧ ಮಿನಿ ಉದ್ಯೋಗ ಮೇಳ ನಡೆಸಲು ತೀರ್ಮಾನಿಸಲಾಗಿದೆ. ಉದ್ಯೋಗ ಮೇಳವನ್ನು ಮುಖ್ಯಮಂತ್ರಿಗಳ ಅಧಿಕೃತ ಗೃಹ ಕಚೇರಿ ಕೃಷ್ಣಾದಲ್ಲಿ ನಡೆಸುವ ಯೋಚನೆ ಇದೆಯಾದರೂ ಯಾವ ಸ್ಥಳದಲ್ಲಿ ನಡೆಸಿದರೆ ಸೂಕ್ತ ಎಂಬುದರ ಬಗ್ಗೆ ಸಮಾಲೋಚನೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು. 

ಜನರಿಗೆ ಅನುಕೂಲವಾಗುವಂತೆ ಮತ್ತು ಮಾನವೀಯ ದೃಷ್ಟಿಯಿಂದ ಕಾರ್ಯಕ್ರ ಮಗಳನ್ನು ರೂಪಿಸಲಾಗುತ್ತದೆ. ಸರ್ಕಾರವು ಮಾನವೀಯತೆ ಮತ್ತು ತಾಯಿ ಹೃದಯ ಹೊಂದಿದ್ದರೆ ಮಾತ್ರ ಉತ್ತಮ ಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.

click me!