
ಬೆಂಗಳೂರು(ಸೆ.19): ಮಾಜಿ ಸಚಿವ ಡಾ.ಖಮರ್ ಉಲ್ ಇಸ್ಲಾಂ ಇನ್ನಿಲ್ಲ. ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಖಮರ್ ಉಲ್ ಇಸ್ಲಾಂ ನಿನ್ನೆ ಬೆಳಗ್ಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರುಳೆದಿದ್ದಾರೆ.
ನಿನ್ನೆ ಬೆಂಗಳೂರಿನಲ್ಲಿ ಸಿಎಂ ಸಿದ್ಧರಾಮಯ್ಯ, ಪರಮೇಶ್ವರ್, ಕೇರಳ ಮಾಜಿ ಸಿಎಂ ಓಮನ್ ಚಾಂಡಿ ಸೇರಿದಂತೆ ಹಲವು ನಾಯಕರು ಮಾಜಿ ಸಚಿವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು. ಬಳಿಕ ನಂದಿದುರ್ಗ ರಸ್ತೆಯಲ್ಲಿರುವ ಖಾದ್ರಿಯಾ ಮಸೀದಿಯಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಆದ ಬಳಿಕ ರಸ್ತೆ ಮಾರ್ಗವಾಗಿ ಪಾರ್ಥೀವ ಶರೀರವನ್ನು ಕಲ್ಬುರ್ಗಿಗೆ ಕೊಂಡೊಯ್ಯಲಾಗಿದ್ದು, ಖಮರ್ ಉಲ್ ನಿವಾಸದ ಪಕ್ಕದಲ್ಲಿರುವ ನೋಬೆಲ್ ಶಾಲಾ ಆವರಣದಲ್ಲಿ ಸಂಬಂಧಿಕರಿಗಾಗಿ ಅಂತಿಮ ದರ್ಶನದ ವ್ಯವಸ್ಥೆ ಮಾಡಲಾಗಿದೆ.
ಆ ನಂತರ ನಗರದ ಹೊರವಲಯದ ಕೆಸಿಟಿ ಕಾಲೇಜು ಮೈದಾನದಲ್ಲಿ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಜಿಲ್ಲಾ ನ್ಯಾಯಾಲಯ ಹಿಂಬದಿಯ ಖಲಂದರ್ ಖಾನ್ ರುದ್ರ ಭೂಮಿಯಲ್ಲಿ ಇವತ್ತು ಅಂತ್ಯಕ್ರಿಯೆ ನಡೆಯಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.