ಐವರ ರಾಜೀನಾಮೆ ಪಡೆಯಲು ಕಾಂಗ್ರೆಸ್‌ ಸಜ್ಜು

Published : Jul 07, 2019, 10:22 AM IST
ಐವರ ರಾಜೀನಾಮೆ ಪಡೆಯಲು ಕಾಂಗ್ರೆಸ್‌ ಸಜ್ಜು

ಸಾರಾಂಶ

ಕರ್ನಾಟಕ ಮೈತ್ರಿ ಪಡೆಯಲ್ಲಿ ರಾಜೀನಾಮೆ ನೀಡಿದ ಶಾಸಕರಲ್ಲಿ ಐದಾರು ಜನರ ರಾಜೀನಾಮೆ ಪಡೆಯಲು ಮಾತ್ರವೇ ಕಾಂಗ್ರೆಸ್ ಚಿಂತನೆ ನಡೆಸಿದೆ. 

ಬೆಂಗಳೂರು [ಜು.07]:  ರಾಮಲಿಂಗಾರೆಡ್ಡಿ ಅವರ ಷರತ್ತನ್ನು ಸಂಪೂರ್ಣವಾಗಿ ಒಪ್ಪಲು ಕಾಂಗ್ರೆಸ್‌ ಸಿದ್ಧವಿಲ್ಲ. ಹಾಲಿ ಸಂಪುಟದಲ್ಲಿರುವ ಪಕ್ಷನಿಷ್ಠರಾದ ಐದಾರು ಸಚಿವರ ರಾಜೀನಾಮೆ ಪಡೆಯುವ ದಿಸೆಯಲ್ಲಿ ಮಾತ್ರ ಕಾಂಗ್ರೆಸ್‌ ಚಿಂತಿಸುತ್ತಿದೆ.

ಏಕೆಂದರೆ, ಎಲ್ಲಾ ಸಚಿವರ ರಾಜೀನಾಮೆ ಪಡೆದರೆ ಹುದ್ದೆ ಕಳೆದುಕೊಂಡವರು ಅತೃಪ್ತರಾಗುವ ಸಾಧ್ಯತೆಯಿದೆ. ಇದು ಮತ್ತಷ್ಟುಸಮಸ್ಯೆಗೆ ಕಾರಣವಾಗಬಹುದು ಎಂಬ ಚಿಂತೆ ಕಾಂಗ್ರೆಸ್‌ ನಾಯಕರಿಗೆ ಇದೆ ಎನ್ನಲಾಗುತ್ತಿದೆ.

ಸಿದ್ದರಾಮಯ್ಯ ಅವರಂತೂ ಈ ರೀತಿಯ ಷರತ್ತುಗಳಿಗೆ ಒಪ್ಪಿಗೆ ನೀಡಿದರೆ ಪರಿಸ್ಥಿತಿ ಮತ್ತಷ್ಟುಹದಗೆಡಲು ನಾವೇ ಆಸ್ಪದ ಮಾಡಿಕೊಟ್ಟಂತಾಗುತ್ತದೆ. ಅದಕ್ಕಿಂತ ಪ್ರತಿಪಕ್ಷದಲ್ಲಿ ಕೂರುವುದೇ ಮೇಲು ಎಂದು ವೇಣುಗೋಪಾಲ್‌ ಅವರಿಗೆ ಹೇಳಿದ್ದಾರೆ ಎನ್ನಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Bengaluru: ಕಂಡೋರ ಹೆಂಡ್ತಿಯನ್ನು ಪಟಾಯಿಸಿದ ಪೊಲೀಸಪ್ಪ; ಇದು ರೀಲ್ಸ್ ಅಂಟಿಯ ಮೋಹದ ಕಥೆ
ಬೆಂಗಳೂರಿನಲ್ಲಿ ಜಿಮ್‌ಗೆ ಹೋದ್ರೆ, ಚಿಕನ್‌ ತಿಂದ್ರೆ ಮ್ಯಾನೇಜರ್‌ ನಗ್ತಾರೆ: NRI ಪೋಸ್ಟ್‌ನಿಂದ ಆಘಾತಕಾರಿ ಸತ್ಯ ಬಯಲು!