
ಬೆಂಗಳೂರು : ಸಮ್ಮಿಶ್ರ ಸರ್ಕಾರದ ಸಚಿವ ಸಂಪುಟ ರಚನೆ ಹಾಗೂ ಸಮನ್ವಯ ಸಮಿತಿಯ ಮೊದಲ ಸಭೆಗೂ ಮೊದಲೇ ಹಿಂದಿನ ಸರ್ಕಾರದ ಅವಧಿಯಲ್ಲಿ ಮಾಡಿದ್ದ ನಿಗಮ-ಮಂಡಳಿಗಳ ಅಧ್ಯಕ್ಷರ ನೇಮಕಾತಿ ರದ್ದುಗೊಳಿಸಿರುವುದು ಕಾಂಗ್ರೆಸ್ ಪಾಳೆಯದಲ್ಲಿ ತೀವ್ರ ಅಸಮಾಧಾನ ಸೃಷ್ಟಿಸಿದೆ.
ಸಮನ್ವಯ ಸಮಿತಿ ಸಭೆ ನಡೆಯುವ ಮೊದಲೇ ಏಕಾಏಕಿ ಹಾಲಿ ನಿಗಮ-ಮಂಡಳಿಗಳ ಅಧ್ಯಕ್ಷರು, ಸದಸ್ಯರ ಅಧಿಕಾರ ಮೊಟಕು ಗೊಳಿಸಲು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಆದೇಶಿಸಿದ್ದಾರೆ.
ಕಳೆದ ಹನ್ನೊಂದು ತಿಂಗಳ ಹಿಂದೆ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎರಡನೇ ಹಂತದಲ್ಲಿ 80 ಮಂದಿ ನಿಗಮ-ಮಂಡಳಿ ಅಧ್ಯಕ್ಷರು ಹಾಗೂ 20ಕ್ಕೂ ಹೆಚ್ಚು ಪ್ರಾಧಿಕಾರಗಳ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಿಸಿದ್ದರು. ಈ ವೇಳೆ ಮುಂದಿನ ಆದೇಶದವರೆಗೂ ಅವರ ಅಧಿಕಾರಾವಧಿ ಮುಂದುವರೆಯುವುದಾಗಿ ನೇಮಕಾತಿ ಆದೇಶದಲ್ಲಿ ಸೂಚಿಸಲಾಗಿತ್ತು. ಆದರೆ, ಸೋಮವಾರ ಏಕಾಏಕಿ ನಿಗಮ ಮಂಡಳಿ ಅಧ್ಯಕ್ಷರು ಹಾಗೂ ಸದಸ್ಯರ ಹುದ್ದೆ ತೆರವುಗೊಳಿಸಿರುವುದು ಅಸಮಾಧಾನಕ್ಕೆ ಕಾರಣವಾಗಿದೆ ಎನ್ನಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.