ಪ್ರವಾಹ ಪರಿಹಾರಕ್ಕೆ 195 ರೂ ಕೋಟಿ ಬಿಡುಗಡೆ

Published : Aug 20, 2019, 10:29 AM IST
ಪ್ರವಾಹ ಪರಿಹಾರಕ್ಕೆ 195 ರೂ ಕೋಟಿ ಬಿಡುಗಡೆ

ಸಾರಾಂಶ

ಪ್ರವಾಹ ಪರಿಸ್ಥಿತಿಯನ್ನು ನಿರ್ವಹಿಸಲು, ಪರಿಹಾರ ಕಾರ್ಯಗಳಿಗೆ ಹಾಗೂ ನೆರೆ ಸಂತ್ರಸ್ತರಿಗೆ ಬಟ್ಟೆ, ಮತ್ತಿತರ ಸೌಲಭ್ಯ ಒದಗಿಸಲು ರಾಜ್ಯ ಸರ್ಕಾರ ಒಟ್ಟು 195 ಕೋಟಿ ರು. ಅನುದಾನ ಬಿಡುಗಡೆ ಮಾಡಿದೆ.

ಬೆಂಗಳೂರು (ಆ. 20): ಪ್ರವಾಹ ಪರಿಸ್ಥಿತಿಯನ್ನು ನಿರ್ವಹಿಸಲು, ಪರಿಹಾರ ಕಾರ್ಯಗಳಿಗೆ ಹಾಗೂ ನೆರೆ ಸಂತ್ರಸ್ತರಿಗೆ ಬಟ್ಟೆ, ಮತ್ತಿತರ ಸೌಲಭ್ಯ ಒದಗಿಸಲು ರಾಜ್ಯ ಸರ್ಕಾರ ಒಟ್ಟು 195 ಕೋಟಿ ರು. ಅನುದಾನ ಬಿಡುಗಡೆ ಮಾಡಿದೆ.

ರಾಜ್ಯದಲ್ಲಿ ಪ್ರವಾಹ ಪೀಡಿತ ತಾಲ್ಲೂಕುಗಳಲ್ಲಿ ಸಂತ್ರಸ್ತರಿಗೆ ಬಟ್ಟೆಬರೆ ಹಾಗೂ ದಿನ ಬಳಕೆಯ ವಸ್ತುಗಳಿಗಾಗಿ ಪ್ರತಿ ಕುಟುಂಬಕ್ಕೆ 10 ಸಾವಿರ ರು. ಗಳಂತೆ ವಿತರಿಸಲು ರಾಜ್ಯ ವಿಪತ್ತು ನಿರ್ವಹಣಾ ನಿಧಿಯಡಿ ರಾಜ್ಯ ಸರ್ಕಾರದ ಹೆಚ್ಚುವರಿ ಪಾಲಿನ ಅನುದಾನದಿಂದ 80 ಕೋಟಿ ರು. ಅನುದಾನ ಮಂಜೂರು ಮಾಡಲಾಗಿದೆ.

ಅಲ್ಲದೆ, ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಉಂಟಾಗಿರುವ ನೆರೆ ಪರಿಸ್ಥಿತಿಯನ್ನು ನಿರ್ವಹಿಸಲು ಮತ್ತು ಪರಿಹಾರ ಕಾರ್ಯಗಳಿಗಾಗಿ ಸರ್ಕಾರವು 115 ಕೋಟಿ ರು. ಅನುದಾನವನ್ನು ಜಿಲ್ಲಾಧಿಕಾರಿಗಳಿಗೆ ಬಿಡುಗಡೆ ಮಾಡಿದೆ ಎಂದು ಮುಖ್ಯಮಂತ್ರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Tirupathi Laddu: ತಿರುಪತಿ ಲಡ್ಡು ಮಾರಾಟದಲ್ಲಿ ವಿಶ್ವದಾಖಲೆ: ಒಂದೇ ತಿಂಗಳಲ್ಲಿ 1.26 ಕೋಟಿ ಲಡ್ಡು ಸೇಲ್!
Honey Facts: 3000 ವರ್ಷವಾದರೂ ಜೇನುತುಪ್ಪ ಕೆಡುವುದಿಲ್ಲವೇ? ಇಲ್ಲಿದೆ ಅಚ್ಚರಿಯ ಸತ್ಯ!