
ಚೆನ್ನೈ[ಆ.12]: ಭಾರೀ ನೀರಿನ ಕೊರತೆ ಎದುರಿಸುತ್ತಿದ್ದ ತಮಿಳುನಾಡಿನ ಮೆಟ್ಟೂರು ಜಲಾಶಯಕ್ಕೆ ಒಂದೇ ದಿನದಲ್ಲಿ 10 ಅಡಿಯಷ್ಟುನೀರು ಹರಿದು ಬಂದಿದೆ.
ಕರ್ನಾಟಕದ ಜಲಾಶಯಗಳು ತುಂಬಿದ ಹಿನ್ನೆಲೆಯಲ್ಲಿ ಕೆಆರ್‌ಎಸ್ ಮತ್ತು ಕಬಿನಿ ಜಲಾಶಯದಿಂದ ಭಾರೀ ಪ್ರಮಾಣದಲ್ಲಿ ನೀರು ಬಿಡಲಾಗುತ್ತಿದ್ದು, ಅದು ಮೆಟ್ಟೂರು ಜಲಾಶಯ ಸೇರುತ್ತಿದೆ. ಹೀಗಾಗಿ ನಿರೀಕ್ಷೆಗೂ ಮೀರಿದ ವೇಗದಲ್ಲಿ ಜಲಾಶಯ ತುಂಬತೊಡಗಿದೆ.
ವರುಣನ ಅಬ್ಬರಕ್ಕೆ ಕರುನಾಡು ತತ್ತರ: ಮಳೆಗೆ ಸಂಬಂಧಿಸಿದ ಎಲ್ಲಾ ಸುದ್ದಿಗಳಿಗಾಗಿ ಕ್ಲಿಕ್ಕಿಸಿ
ಭಾನುವಾರ ಮೆಟ್ಟೂರು ಜಲಾಶಯಕ್ಕೆ 95000 ಕ್ಯುಸೆಕ್ ನೀರು ಹರಿದುಬರುತ್ತಿದ್ದು, 1000 ಕ್ಯುಸೆಕ್ ಹೊರಬಿಡಲಾಗುತ್ತಿದೆ. ಗರಿಷ್ಠ 120 ಅಡಿ ನೀರು ಸಂಗ್ರಹ ಸಾಮರ್ಥ್ಯದ ಮೆಟ್ಟೂರು ಜಲಾಶಯದಲ್ಲಿ ಶನಿವಾರ 57 ಅಡಿ ನೀರು ಸಂಗ್ರಹವಾಗಿದ್ದರೆ, ಅದು ಭಾನುವಾರ 67.40 ಅಡಿಗೆ ಏರಿದೆ. ಇದೇ ವೇಗದಲ್ಲಿ ನೀರು ತುಂಬುತ್ತಾ ಬಂದಲ್ಲಿ ಇನ್ನು ಒಂದು ವಾರದಲ್ಲಿ ಜಲಾಶಯ ಬಹುತೇಕ ಭರ್ತಿಯಾಗಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.