
ಬೆಂಗಳೂರು[ಜು. 23] ಮೈತ್ರಿ ಸರ್ಕಾರದ ಪರವಾಗಿ ಎಚ್ ಡಿ ಕುಮಾರಸ್ವಾಮಿ ಮಂಡಿಸಿದ ವಿಶ್ವಾಸಮತಯಾಚನೆ ವೇಳೆಯಲ್ಲಿ ಸದನದಿಂದ ದೂರ ಉಳಿದಿದ್ದ ಕೊಳ್ಳೆಗಾಲದ ಬಿಎಸ್ಪಿ ಪಕ್ಷದ ಎನ್. ಮಹೇಶ್ ಅವರನ್ನು ಬಿಎಸ್‌ಪಿ ಅಮಾನತು ಮಾಡಿದೆ.
ಪಕ್ಷದ ಆದೇಶ ಉಲ್ಲಂಘನೆ ಹಿನ್ನೆಲೆಯಲ್ಲಿ ಶಾಸಕ ಎನ್. ಮಹೇಶ್ ಅವರನ್ನು ಬಿಎಸ್ಪಿ ಪಕ್ಷದಿಂದ ಅಮಾನತುಪಡಿಸಿ ಪಕ್ಷದ ವರಿಷ್ಠೆ ಮಾಯಾವತಿ ಆದೇಶ ನೀಡಿದ್ದಾರೆ.
ಮೈತ್ರಿ ಸರ್ಕಾರದ ಪರವಾಗಿ ಪಾಲ್ಗೊಂಡು ಕುಮಾರಸ್ವಾಮಿ ಅವರನ್ನು ಬೆಂಬಲಿಸುವಂತೆ ಮಾಯಾವತಿ ಆದೇಶ ನೀಡಿದ್ದರು. ಆದರೆ ಇದೆಲ್ಲವನ್ನು ಕಡೆಗಣಿಸಿ ಮಹೇಶ್ ಗೈರಾಗಿದ್ದು ಶಿಕ್ಷೆಗೆ ಗುರಿಯಾಗಿದ್ದಾರೆ. ಅಮಾನತು ವಿಚಾರವನ್ನು ಮಾಯಾಔತಿ ಟ್ವೀಟ್ ಮೂಲಕ ಸ್ಪಷ್ಟಪಡಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.