ಕರ್ನಾಟಕದಲ್ಲಿ 2 ಹಂತದಲ್ಲಿ ಲೋಕಸಭಾ ಚುನಾವಣೆ, ಏ.18,23ರಂದು ಮತದಾನ

By Web DeskFirst Published Mar 10, 2019, 6:24 PM IST
Highlights

ಕರ್ನಾಟಕದಲ್ಲಿ 2 ಹಂತದಲ್ಲಿ ಲೋಕಸಭಾ ಚುನಾವಣೆ| ಮೊದಲನೇ ಹಂತದಲ್ಲಿ 14 ಕ್ಷೇತ್ರ ಹಾಗೂ 2ನೇ ಹಂತದಲ್ಲಿ 14 ಕ್ಷೇತ್ರಗಳಿಗೆ ಮತದಾನ| ಮೊದಲನೇ ಹಂತ ಮತದಾನ ಏ.18 ಹಾಗೂ ಎರಡನೇ ಹಂತದ ಮತದಾನ ಏಪ್ರಿಲ್ 23ರಂದು

ನವದೆಹಲಿ, [ಮಾ.10]: 17ನೇ ಲೋಕಸಭಾ ಚುನಾವಣೆಗೆ ದಿನಾಂಕ ನಿಗದಿಯಾಗಿದೆ. ಇಂದು [ಭಾನುವಾರ] ಕೇಂದ್ರ ಚುನಾವಣೆ ಆಯೋಗ ಮುಖ್ಯಸ್ಥ ಸುನೀಲ್ ಅರೋರ ಅವರು ದಿನಾಂಕ ಪ್ರಕಟಿಸಿದರು.

ದೇಶದಲ್ಲಿ ಒಟ್ಟು 7 ಹಂತಗಳಲ್ಲಿ ಮತದಾನ ನಡೆಯಲಿದ್ದು, ಮೇ 23 ರಂದು ಫಲಿತಾಂಶ ಪ್ರಕಟವಾಗಲಿ. ಕರ್ನಾಟಕದಲ್ಲಿ ಒಟ್ಟು 28 ಕ್ಷೇತ್ರಗಳಿಗೆ ಎರಡು ಹಂತಗಳಲ್ಲಿ ಮತದಾನ ನಡೆಯಲಿದ್ದು, ಇಂದಿನಿದಂದಲೇ ನೀತಿ ಸಂಹಿತಿ ಜಾರಿಯಾಗಿದೆ.

ಲೋಕಸಮರದ ದಿನಾಂಕ ಪ್ರಕಟ: ಮತದಾನಕ್ಕೆ ಸಜ್ಜಾಯಿತು ದೇಶ!

ಏಪ್ರಿಲ್ 18 ಗುರುವಾರ 14 ಕ್ಷೇತ್ರಗಳಿಗೆ ಮೊದಲನೇ ಹಂತ ಮತದಾನ ನಡೆದರೆ, ಇನ್ನುಳಿದ 14 ಕ್ಷೇತ್ರಗಳಿಗೆ ಏಪ್ರಿಲ್ 23 ಮಂಗಳವಾರ  2ನೇ ಹಂತದ ಮತದಾನ ನಡೆಯಲಿದೆ.

ಮೊದಲ ಹಂತದ ಚುನಾವಣೆಯ ಡಿಟೇಲ್ಸ್
* ಕರ್ನಾಟಕದ ಮೊದಲ ಹಂತದ ಚುನಾವಣೆ ಏಪ್ರಿಲ್ 18ರಂದು.
*ಮೊದಲ ಹಂತದ ಚುನಾವಣೆ ನಾಮಪತ್ರ ಸಲ್ಲಿಕೆ ಮಾರ್ಚ್ 19ರಿಂದ.
*ಮೊದಲ ಹಂತದ ಚುನಾವಣೆ ನಾಮಪತ್ರ ಸಲ್ಲಿಕೆಗೆ ಮಾರ್ಚ್ 26 ಕೊನೆ ದಿನ.
* ಮೊದಲ ಹಂತದ ಚುನಾವಣೆ ನಾಮಪತ್ರಗಳ ಪರಿಶೀಲನೆ ಮಾರ್ಚ್ 27.
* ನಾಮಪತ್ರ ವಾಪಸ್ ಪಡೆಯಲು ಮಾರ್ಚ್ 29 ಕೊನೆ ದಿನ.

2ನೇ ಹಂತದ ಚುನಾವಣೆಯ ಡಿಟೇಲ್ಸ್
* ಮತದಾನ ನಡೆದರೆ, ಇನ್ನುಳಿದ 14 ಕ್ಷೇತ್ರಗಳಿಗೆ ಏಪ್ರಿಲ್ 23 ಮಂಗಳವಾರ  2ನೇ ಹಂತದ ಮತದಾನ ನಡೆಯಲಿದೆ.
*ಮಾರ್ಚ್ 28ರಿಂದ 2ನೇ ಹಂತದ ಚುನಾವಣೆ ನಾಮಪತ್ರ ಸಲ್ಲಿಕೆ .
*ಎರಡನೇ ಹಂತದ ಚುನಾವಣೆ ನಾಮಪತ್ರ ಸಲ್ಲಿಕೆಗೆ ಏಪ್ರಿಲ್ 4 ಕೊನೆ ದಿನ.
*ಎರಡನೇ ಹಂತದ ಚುನಾವಣೆ ನಾಮಪತ್ರಗಳ ಪರಿಶೀಲನೆ ಏಪ್ರಿಲ್ 5.
*ನಾಮಪತ್ರ ವಾಪಸ್ ಪಡೆಯಲು ಮಾರ್ಚ್  ಕೊನೆ ದಿನ ಏಪ್ರಿಲ್ 8.

ಮೊದಲ ಹಂತದ 14 ಕ್ಷೇತ್ರಗಳು (ಏ.18)
ಉಡುಪಿ-ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ, ಮಂಡ್ಯ, ತುಮಕೂರು, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ, ಕೋಲಾರ.

2ನೇ ಹಂತದ ಚುನಾವಣೆ (ಏ.23)
ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ
ಉತ್ತರ ಕನ್ನಡ, ದಾವಣಗೆರೆ, ಶಿವಮೊಗ್ಗ.

click me!