
ಬೆಂಗಳೂರು[ಆ.18]: ಕೊಡಗು ನೆರೆಯಿಂದ ಮೃತರಾದವರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ರಾಜ್ಯ ಸರ್ಕಾರ ಘೋಷಿಸಿದೆ.
ಕೊಡಗು ಉಸ್ತುವಾರಿ ಸಚಿವ ಸಾ.ರಾ.ಮಹೇಶ್ ಅವರು ಸುವರ್ಣ ನ್ಯೂಸ್ .ಕಾಂ ಸೋದರ ಸಂಸ್ಥೆ ಸುವರ್ಣ ನ್ಯೂಸ್ ಗೆ ತಿಳಿಸಿದ್ದಾರೆ. ಮನೆ ಕಳೆದುಕೊಂಡಿರುವ ಕುಟುಂಬಗಳಿಗೆ 2 ಲಕ್ಷ ರೂ. ನೀಡಲಾಗುತ್ತದೆ. ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಪರಿಹಾರ ಹಣವನ್ನು ಘೋಷಿಸಿರುವ ಬಗ್ಗೆ ತಿಳಿಸಿರುವ ಅವರು ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ಸರ್ಕಾರದಿಂದಲೇ ಭರಿಸಲು ನಿರ್ಧರಿಸಲಾಗಿದೆ ಎಂದು ಹೇಳಿದರು.
6 ಮಂದಿ ಸಾವು, 58 ಸೇತುವೆ ಕುಸಿತ
ಕೊಡಗಿನಲ್ಲಿ ಕಂಡು ಕೇಳರಿಯದ ಜಲಪ್ರಳಯಕ್ಕೆ ಜನ ತತ್ತರಿಸಿದ್ದಾರೆ. ನೂರಾರು ಮನೆಗಳು ನೆಲಸಮಾಧಿಯಾಗಿದ್ದು ಗುಡ್ಡಗಳು ಕುಸಿಯುತ್ತಿವೆ. ವರುಣನ ರೌದ್ರಾವತಾರಕ್ಕೆ ಸಾವಿರಾರು ಮಂದಿ ಸಂತ್ರಸ್ತರಾಗಿದ್ದಾರೆ. ಭಾರೀ ಪ್ರವಾಹಕ್ಕೆ ಇದುವರೆಗೂ 6 ಮಂದಿ ಮೃತಪಟ್ಟಿದ್ದಾರೆ. 58 ಸೇತುವೆ ಕುಸಿದಿವೆ. ಜಿಲ್ಲೆಯಾದ್ಯಂತ ಸೇನೆ ಹಾಗೂ ಎನ್ ಡಿಆರ್ ಎಫ್ ತಂಡ 873 ಮಂದಿಯನ್ನು ರಕ್ಷಿಸಿಸಿದೆ. ಹಲವು ಕಡೆ ವಿದ್ಯುತ್, ರಸ್ತೆ ಸಂಪರ್ಕ ಕಡಿತಗೊಂಡಿದೆ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.