ದೋಸ್ತಿ ಖತಂ.. ಅಮೆರಿಕದಿಂದ ಬಂದ ತಕ್ಷಣ ಸಿಎಂ ಕುಮಾರಸ್ವಾಮಿ ರಾಜೀನಾಮೆ?

Published : Jul 06, 2019, 07:56 PM ISTUpdated : Jul 06, 2019, 08:37 PM IST
ದೋಸ್ತಿ ಖತಂ.. ಅಮೆರಿಕದಿಂದ ಬಂದ ತಕ್ಷಣ ಸಿಎಂ ಕುಮಾರಸ್ವಾಮಿ ರಾಜೀನಾಮೆ?

ಸಾರಾಂಶ

ದೋಸ್ತಿ ಸರಕಾರದ ಗೊಂದಲಗಳಿಗೆ ತೆರೆ ಬೀಳುವ ಇನ್ನೊಂದು ಸುದ್ದಿ ಹೊರಬೀಳುತ್ತಿದೆ. ಸಿಎಂ ಕುಮಾರಸ್ವಾಮಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿ ಗಟ್ಟಿಯಾಗಿದೆ.

ಬೆಂಗಳೂರು[ಜು. 06]  ಅಮೆರಿಕ ಪ್ರವಾಸದಿಂದ ಹೊರಟಿರುವ ಕುಮಾರಸ್ವಾಮಿ ಮಂಗಳವಾರ ಶಾಸಕಾಂಗ ಸಭೆ ನಡೆಸಲಿದ್ದು ಸಭೆಯಲ್ಲಿಯೇ ವಿದಾಯ ಭಾಷಣ ಮಾಡಲಿದ್ದಾರೆ ಎಂದು ಹೇಳಲಾಗಿದೆ.

ಅಮೆರಿಕದಿಂದ ಈಗಾಗಲೇ ವಿಮಾನ ಏರಿರುವ ಸಿಎಂ ಭಾನುವಾರ  ರಾತ್ರಿ 8.30ಕ್ಕೆ ಬೆಂಗಳೂರಿಗೆ ಬಂದಿಳಿಯಲಿದ್ದಾರೆ. ಬಂದಿಳಿದ ನಂತರ ರಾಜೀನಾಮೆ ಅಧಿಕೃತ ಘೊಷಣೆ ಮಾಡುವ ಸಾಧ್ಯತೆ ಇದೆ.  ಶಾಸಕರನ್ನು ನಿಯಂತ್ರಣ ಅಸಾಧ್ಯ ಎಂಬುದನ್ನು ಮನಗಂಡಿರುವ ಸಿಎಂ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಹೇಳಲಾಗಿದೆ.

ಕರ್ನಾಟಕ ರಾಜಕಾರಣದಲ್ಲಿ ಬೆಳಗ್ಗೆಯಿಂದ ಏನೇನಾಯ್ತು?

ಜಂಟಿ ಶಾಸಕಾಂಗ ಸಭೆಯಲ್ಲಿಯೇ  ವಿದಾಯ ಭಾಷಣ ಮಾಡಿ  ನಂತರ ರಾಜ್ಯಪಾಲರ ಭೇಟಿ ಮಾಡಿ ರಾಜೀನಾಮೆ ಸಲ್ಲಿಸುವ ಸಾಧ್ಯತೆ ಹೆಚ್ಚಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಎಸ್ಸಿ ಒಳ ಮೀಸಲಾತಿ ಜಾರಿ ವಿಧೇಯಕಕ್ಕೆ ಸಂಪುಟ ಅಸ್ತು: ಚಾರಿತ್ರಿಕ ಆದೇಶಕ್ಕೆ ಕಾನೂನು ಬಲ
ಹೈಕಮಾಂಡ್‌ ನಿರ್ಧಾರ ಫೈನಲ್, ಪದೇ ಪದೆ ಯಾಕೆ ಕೇಳ್ತೀರಿ?: ಸಿಎಂ ಸಿದ್ದರಾಮಯ್ಯ