ರಾಜ್ಯದಲ್ಲಿ ಮತ್ತೊಂದು ಸಾಲಮನ್ನಾಕ್ಕೆ ಮುಂದಾದ ಕುಮಾರಸ್ವಾಮಿ

By Web DeskFirst Published Oct 20, 2018, 10:04 PM IST
Highlights

ರಾಜ್ಯದಲ್ಲಿ ಮತ್ತೊಂದು ಸಾಲಮನ್ನಾಕ್ಕೆ ಮುಂದಾದ ಕುಮಾರಸ್ವಾಮಿ ಅವರು ಮುಂದಾಗಿದ್ದಾರೆ. ಅದ್ಯಾವ ಸಾಲ ಎನ್ನುವ ವಿವರಣೆ ಇಲ್ಲಿದೆ.

ಬೆಂಗಳೂರು, [ಅ.20]: ರಾಜ್ಯದಲ್ಲಿರುವ ಕಾಂಗ್ರೆಸ್ ಹಾಗೂ ಜೆಡಿಎಸ್ ನೇತೃತ್ವದ ಸಮ್ಮಿಶ್ರ ಸರ್ಕಾರವು ಮತ್ತೊಂದು ಸಾಲ ಮನ್ನಾಕ್ಕೆ ಮುಂದಾಗಿದೆ.

ದಲಿತರ ಮನವೊಲಿಕೆಗೆ ಮುಂದಾಗಿರುವ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಪರಿಶಿಷ್ಟ ಜಾತಿ [ಎಸ್ ಸಿ] ಮತ್ತು ಪರಿಶಿಷ್ಟ ಪಂಗಡ [ಎಸ್. ಟಿ] ವಿದ್ಯಾರ್ಥಿಗಳ ಶೈಕ್ಷಣಿಕ ಸಾಲಮನ್ನಾ ಮಾಡುವುದಕ್ಕೆ ಚಿಂತನೆ ನಡೆಸಿದ್ದಾರೆ.

ಇದಕ್ಕೆ ಪೂರಕವೆಂಬಂತೆ ರಾಜ್ಯದಲ್ಲಿರುವ ರಾಷ್ಟ್ರೀಕೃತ ಬ್ಯಾಂಕ್ ಸೇರಿದಂತೆ ಎಲ್ಲಾ ವಿಧದ ಬ್ಯಾಂಕ್ ಗಳಿಂದ ಪಡೆದಿರುವ ಶೈಕ್ಷಣಿಕ ಸಾಲ ಬಗ್ಗೆ ಸಮರ್ಪಕ ಮಾಹಿತಿ ನೀಡುವಂತೆ ಈಗಾಗಲೇ ಸಮಾಜಕಲ್ಯಾಣ ಇಲಾಖೆ ಸುತ್ತೋಲೆ ಹೊರಡಿಸಿದೆ.

ಮಾಹಿತಿ ಪಡೆದುಕೊಂಡ ಬಳಿಕ ಸಾಲಮನ್ನಾ ಪ್ರಸ್ತಾವನೆ ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸಲಿದ್ದು, ಬಳಿಕ ಸಮಾಜಕಲ್ಯಾಣ ಇಲಾಖೆಯಿಂದ ಶೈಕ್ಷಣಿಕ ಸಾಲ ಮನ್ನಾಕ್ಕೆ ಆಡಳಿತಾತ್ಮಕ ಪ್ರಕ್ರಿಯೆ ಆರಂಭವಾಗಲಿದೆ.

ಈಗಾಗಲೇ ಬೆಳೆ ಸಾಲ ಮನ್ನಾ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಆದರೆ, ಇನ್ನು ಹಣ ಬಿಡುಗಡೆಯಾಗಿಲ್ಲ. ಹೀಗಾಗಿ ಫಲಾನುಭವಿ ರೈತರು ತಮ್ಮ ಸಾಲ ಮನ್ನಾ ಆಗುತ್ತೆ ಎನ್ನುವ ನಿರೀಕ್ಷೆಯಲ್ಲಿದ್ದಾರೆ. 

ಇದಕ್ಕಾಗಿ ಸಿಎಂ ಕುಮಾರಸ್ವಾಮಿ ಅವರು ಬೇರೆ ಬೇರೆ ಮೂಲಗಳಿಂದ ಬರುವ ಆದಾಯವನ್ನು ರೈತರ ಸಾಲ ಮನ್ನಾಕ್ಕೆ ಬಳಸಿಕೊಳ್ಳುತ್ತಿದ್ದಾರೆ. ಆದ್ರೆ, ಈಗ ಮತ್ತೊಂದು ಸಾಲ ಮನ್ನಾಕ್ಕೆ ಮುಂದಾಗಿದ್ದು, ಯಾವ ಆದಾಯದಿಂದ ಹಣ ಜೋಡಿಸುತ್ತಾರೋ.

click me!