
ಬೆಂಗಳೂರು (ಮೇ. 28): ಹಾಸನ ಜಿಲ್ಲೆಯಲ್ಲಿ ಮೂಲಭೂತ ವಿಮಾನಯಾನಕ್ಕೆ ಅನುವಾಗುವಂತೆ ‘ನೋ ಫ್ರಿಲ್ಸ್’ ಮಾದರಿ ಏರ್ಪೋರ್ಟ್ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ.
ಈ ಸಂಬಂಧ ವಿಸ್ತೃತ ವರದಿ ಸಿದ್ಧಪಡಿಸಲು ಖಾಸಗಿ ಕಂಪನಿಗೆ ಟೆಂಡರ್ ವಹಿಸಿ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಹಾಸನದಲ್ಲಿ ನೋ ಫ್ರಿಲ್ಸ್ ಅರ್ಥಾತ್ ಸಾಮಾನ್ಯ ವಿಮಾನಯಾನ ಅಗತ್ಯತೆಯನ್ನು ಪೂರೈಸುವ, ದುಬಾರಿ ಖರ್ಚುವೆಚ್ಚ ಹೊಂದಿಲ್ಲದ ವಿಮಾನ ನಿಲ್ದಾಣ ನಿರ್ಮಾಣಕ್ಕೆ ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ.
ಕೇಂದ್ರ ಸರ್ಕಾರದ ವಿಮಾನ ನಿಲ್ದಾಣ ಪ್ರಾಧಿಕಾರದ ಜತೆ ಜಂಟಿ ಮಾಲಿಕತ್ವದಲ್ಲಿ ವಿಮಾನ ನಿಲ್ದಾಣ ನಿರ್ಮಿಸಲಾಗುವುದು. ಇದಕ್ಕೆ ಅಗತ್ಯವಿರುವ ಭೂಮಿಯನ್ನು ಗುರುತಿಸಿದ್ದು, ವಿಮಾನ ನಿಲ್ದಾಣ ನಿರ್ಮಾಣ ಸಂಬಂಧ ವಿಸ್ತೃತ ವರದಿ ಸಿದ್ಧಪಡಿಸಲು ರೈಟ್ಸ್ ಎಂಬ ಸಂಸ್ಥೆಗೆ ಗುತ್ತಿಗೆ ನೀಡಲು ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.
ವಿಮಾನನಿಲ್ದಾಣ ನಿರ್ಮಾಣ ಯೋಜನೆ ಇನ್ನೂ ಪ್ರಾಥಮಿಕ ಹಂತದಲ್ಲಿದೆ. ಈ ಬಗ್ಗೆ ಸದ್ಯದಲ್ಲೇ ಕೇಂದ್ರ ಸರ್ಕಾರದ ಜತೆ ಮಾತುಕತೆ ನಡೆಸಲಾಗುವುದು. ಆ ಭಾಗದ ಸಾರ್ವಜನಿಕರಿಗೆ ವಿಮಾನ ಸೇವೆ ಪಡೆಯಲು ಅನುವಾಗುವಂತೆ ಸರ್ಕಾರ ವಿಮಾನ ನಿಲ್ದಾಣ ನಿರ್ಮಿಸಲು ಮುಂದಾಗಿದೆ. ಇದಕ್ಕೆ ಕೇಂದ್ರ ಸರ್ಕಾರವೂ ಪೂರಕವಾಗಿ ಸ್ಪಂದಿಸುವ ವಿಶ್ವಾಸವಿದೆ ಎಂದು ತಿಳಿಸಿದರು.
ಇದಲ್ಲದೆ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ 21 ಹಳ್ಳಿಗಳಿಗೆ ಕುಡಿಯುವ ನೀರೊದಗಿಸಲು ಬಹುಗ್ರಾಮ ಕುಡಿಯುವ ನೀರು ಯೋಜನೆಗೆ 17.94 ಕೋಟಿ ರು. ವೆಚ್ಚದಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.