
ಬೆಂಗಳೂರು, [ಆ.05]: ರಾಜ್ಯದ ಎಲ್ಲ ಸರ್ಕಾರಿ ನೌಕರರಿಗೂ ಆರೋಗ್ಯ ಭಾಗ್ಯ ಯೋಜನೆ ನೀಡಲು ಬಿ.ಎಸ್.ಯಡಿಯೂರಪ್ಪ ಸರ್ಕಾರ ನಿರ್ಧರಿಸಿದೆ.
ಸರ್ಕಾರಿ ನೌಕರರು ಪಡೆದ ಚಿಕಿತ್ಸೆ ವೆಚ್ಚದ ಮರುಪಾವತಿ ವಿಳಂಬವಾಗ್ತಿತ್ತು. ಅನುದಾನದ ಕೊರತೆ ಹಿನ್ನಲೆ ವೈದ್ಯಕೀಯ ಚಿಕಿತ್ಸೆ ವೆಚ್ಚದ ಮರುಪಾವತಿ ಪಡೆಯೋದು ಸಾಧ್ಯವಾಗುತ್ತಿರಲಿಲ್ಲ. ಹೀಗಾಗಿ ಮರುಪಾವತಿ ವೆಚ್ಚದ ನಿಯಮಗಳಲ್ಲಿ ಬದಲಾವಣೆ ತರಬೇಕು ಎಂದು ಕರ್ನಾಟಕ ಸರ್ಕಾರಿ ನೌಕರರ ಸಂಘ ಮನವಿ ಮಾಡಿತ್ತು.
ಪೋಲೀಸ್ ಇಲಾಖೆಗೆ ಈಗಾಗಲೇ ಆರೋಗ್ಯ ಭಾಗ್ಯ ಯೋಜನೆಯ ಪ್ರಯೋಜನೆ ಸಿಗುತ್ತಿದೆ. ಅದನ್ನ ರಾಜ್ಯದ ಸರ್ಕಾರಿ ನೌಕರರಿಗೆ ವಿಸ್ತರಣೆ ಮಾಡಲು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗಿತ್ತು.
ಈ ಹಿನ್ನೆಲೆಯಲ್ಲಿ ಯಡಿಯೂರಪ್ಪ, ಆರೋಗ್ಯ ಭಾಗ್ಯ ಯೋಚನೆ ವಿಸ್ತರಣೆಗೆ ವಿವರವಾದ ಪ್ರಸ್ತಾವನೆ ಸಲ್ಲಿಸಲು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದು, ಶೀಘ್ರದಲ್ಲಿಯೇ ಜಾರಿಗೆ ತರುವ ಸಾಧ್ಯತೆಗಳಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.