ಕಾರ್ಮಿಕ ಸಂಘಟನೆಗಳು ಭಾರತ್ ಬಂದ್ ಗೆ ಕರೆ ನೀಡಿದ್ದು, ಈ ನಿಟ್ಟಿನಲ್ಲಿ ಹಲವು ಸೇವೆಗಳು ವ್ಯತ್ಯಯವಾಗಲಿದೆ. ಅಲ್ಲದೇ ಬಂದ್ ಗೆ ರಾಜ್ಯ ಸರ್ಕಾರ ಬೆಂಬಲ ನೀಡಿದೆ.
ಮಂಡ್ಯ : ಕೇಂದ್ರ ಸರ್ಕಾರದ ನೀತಿಗಳನ್ನು ವಿರೋಧಿಸಿ, ಕಾರ್ಮಿಕರ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ (ಜೆಸಿಟಿ ಯು) ಬಂದ್ ಕರೆ ನೀಡಿದ್ದು, ಕೇಂದ್ರದ ವಿರುದ್ಧ ಕರೆ ನೀಡಿರುವ ಬಂದ್ ಗೆ ರಾಜ್ಯ ಸರ್ಕಾರದ ಬೆಂಬಲವಿದೆ ಎಂದು ಪರೋಕ್ಷವಾಗಿ ಸಚಿವ ಡಿಸಿ ತಮ್ಮಣ್ಣ ಹೇಳಿದ್ದಾರೆ.
ನಾಳೆ ಭಾರತ್ ಬಂದ್ : ಶಾಲಾ-ಕಾಲೇಜುಗಳಿಗೆ ಇರುತ್ತಾ ರಜೆ..?
ನಾಳೆ ಕೇಂದ್ರ ಸರ್ಕಾರದ ವಿರುದ್ಧ ಬಂದ್ ಗೆ ವಿವಿಧ ಸಂಘಟನೆಗಳು ಕರೆ ನೀಡಿವೆ. ಕಾರ್ಮಿಕರ ಹಿತದೃಷ್ಟಿಯಿಂದ ಅಖಿಲ ಭಾರತ ಬಂದ್ಗೆ ಕರೆ ನೀಡಲಾಗಿದೆ. ನೌಕರರ ಬಂದ್ ಗೆ ನಾವು ಸಹಕಾರ ನೀಡುತ್ತೇವೆ ಎಂದು ಸಚಿವರು ಹೇಳಿದ್ದಾರೆ.
ಭಾರತ್ ಬಂದ್ : ಓಲಾ, ಊಬರ್ ಸೇವೆ ಇರುತ್ತಾ..?
ಬಂದ್ ಹಿನ್ನೆಲೆಯಲ್ಲಿ ನಾಳೆ KSRTC ಬಸ್ ಇರುವುದಿಲ್ಲ. ಆದರೆ ಪರಿಸ್ಥಿತಿ ನೋಡಿಕೊಂಡು ಬಸ್ ಸಂಚಾರಕ್ಕೆ ಅನುವು ಮಾಡುವ ಬಗ್ಗೆ ತೀರ್ಮಾನಿಸಲಾಗುವುದು ಎಂದು ಡಿಸಿ ತಮ್ಮಣ್ಣ ಹೇಳಿದ್ದಾರೆ.
ಈಗಾಗಲೇ ಭಾರತ್ ಬಂದ್ ಹಿನ್ನೆಲೆಯಲ್ಲಿ ಹಲವು ಸಂಘಟನೆಗಳು ಬೆಂಬಲ ಸೂಚಿಸಿವೆ. ಶಾಲಾ ಕಾಲೇಜುಗಳಿಗೂ ಕೂಡ ರಜೆ ಘೋಷಣೆ ಮಾಡಲಾಗಿದೆ.