ಅತಿಥಿ ಉಪನ್ಯಾಸಕರಿಗೆ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್

Published : Jan 07, 2019, 11:14 AM IST
ಅತಿಥಿ ಉಪನ್ಯಾಸಕರಿಗೆ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್

ಸಾರಾಂಶ

ರಾಜ್ಯದ ಪದವಿ ಕಾಲೇಜುಗಳ ಉಪನ್ಯಾಸಕರಿಗೆ ಸರ್ಕಾರ ಗುಡ್ ನ್ಯೂಸ್ ಒಂದನ್ನು ನೀಡಿದೆ. ಉಪನ್ಯಾಸಕರ ಹುದ್ದೆಗಳ ಭರ್ತಿ ಮಾಡುವಾಗ ಕಳೆದ 10 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ಶೇ. 50 ರಷ್ಟು ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸುವುದಾಗಿ ಹೇಳಿದೆ.

ಬೆಂಗಳೂರು :  ರಾಜ್ಯದ ಪದವಿ ಕಾಲೇಜುಗಳಲ್ಲಿ ಖಾಲಿ ಇರುವ ಉಪನ್ಯಾಸಕರ ಹುದ್ದೆಗಳ ಭರ್ತಿ ಮಾಡುವಾಗ ಕಳೆದ 10 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ಶೇ. 50 ರಷ್ಟು ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸುವುದಾಗಿ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ತಿಳಿಸಿದ್ದಾರೆ. 

ಕರ್ನಾಟಕ ರಾಜ್ಯ ಐಸಿಎಸ್‌ಇ ಶಾಲಾ ಕನ್ನಡ ಶಿಕ್ಷಕರ ಸಂಘ ನಗರದ ಶಿಕ್ಷಕರ ಸದನದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ರಾಜ್ಯದ ಪದವಿ ಕಾಲೇಜುಗಳಲ್ಲಿ ಖಾಲಿ ಇರುವ 395 ಪ್ರಾಂಶುಪಾಲರು ಹಾಗೂ 3,800 ಉಪನ್ಯಾಸಕರ ಹುದ್ದೆಗಳನ್ನು 3 ತಿಂಗಳೊಳಗೆ ಭರ್ತಿ ಮಾಡಲಾಗುವುದು. ಈ ಸದರ್ಭದಲ್ಲಿ ಕಳೆದ 10 ವರ್ಷಗಳಿಂದ ಪದವಿ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರುಗಳಿಗೆ ಶೇ.50 ರಷ್ಟು ಹುದ್ದೆಗಳನ್ನು ಮೀಸಲಿಡಲಾಗುವುದು ಎಂದರು.

ಉದ್ಯೋಗ ಲಭ್ಯವಾಗುವ ಪಠ್ಯಕ್ರಮ: ಪ್ರಾಥಮಿಕ ಶಾಲಾ ಶಿಕ್ಷಕರಿಂದ ಪದವಿ ಉಪನ್ಯಾಸಕರವರೆಗೂ ಆಯಾ ವಿಷಯಗಳ ವಿಷಯ ತಜ್ಞರಿಂದ ತರಬೇತಿ ನೀಡುವ ವ್ಯವಸ್ಥೆ ಜಾರಿ ಮಾಡಲಾಗುವುದು. ಬರುವ ಶೈಕ್ಷಣಿಕ ಸಾಲಿನಿಂದ ಪದವಿ ಕಾಲೇಜುಗಳಲ್ಲಿನ ಪಠ್ಯಕ್ರಮಗಳನ್ನು ವಿಷಯ ತಜ್ಞರೊಂದಿಗೆ ಚರ್ಚಿಸಿ ಬದಲಾಯಿಸಲಾಗುವುದು. ವಿದ್ಯಾರ್ಥಿಗಳಿಗೆ ಉದ್ಯೋಗ ಪಡೆದುಕೊಳ್ಳಲು ಪೂರಕವಾಗುವ ಪಠ್ಯಕ್ರಮ ಅಳವಡಿಸಲಾಗುವುದು ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದುಬಾರೆ ಶಿಬಿರದಲ್ಲಿ ಕಳೆದ 10 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ತಕ್ಷ ಹೆಸರಿನ ಆನೆ ಸಾವು
ಕಾರಲ್ಲ, ಸರ್ಕಾರ ಕೆಲಸಕ್ಕೆ ಓಡಾಡಲು ಹೆಲಿಕಾಪ್ಟರ್, ವಿಮಾನ ಖರೀದಿಗೆ ಡಿಕೆಶಿ ನೇತೃತ್ವದಲ್ಲಿ ಸಭೆ