ಫೆ.15 ಅಥವಾ 17ಕ್ಕೆ ಸಿದ್ದರಾಮಯ್ಯ ಸರ್ಕಾರದ ಕೊನೆ ಬಜೆಟ್

Published : Dec 31, 2017, 09:44 AM ISTUpdated : Apr 11, 2018, 12:49 PM IST
ಫೆ.15 ಅಥವಾ 17ಕ್ಕೆ ಸಿದ್ದರಾಮಯ್ಯ ಸರ್ಕಾರದ ಕೊನೆ ಬಜೆಟ್

ಸಾರಾಂಶ

ಕಾಂಗ್ರೆಸ್ ಪಕ್ಷದ ಐದು ವರ್ಷಗಳ ಆಡಳಿತ ಅವಧಿಯ ಕೊನೆಯ ಬಜೆಟ್‌ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಣಿಯಾಗುತ್ತಿದ್ದು, ಫೆಬ್ರವರಿ 15 ಅಥವಾ 17ರಂದು ಬಜೆಟ್ ಮಂಡಿಸಲಿದ್ದಾರೆ ಎಂದು ಸರ್ಕಾರದ ಉನ್ನತ ಮೂಲಗಳು ತಿಳಿಸಿವೆ.

ಬೆಂಗಳೂರು: ಕಾಂಗ್ರೆಸ್ ಪಕ್ಷದ ಐದು ವರ್ಷಗಳ ಆಡಳಿತ ಅವಧಿಯ ಕೊನೆಯ ಬಜೆಟ್‌ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಣಿಯಾಗುತ್ತಿದ್ದು, ಫೆಬ್ರವರಿ 15 ಅಥವಾ 17ರಂದು ಬಜೆಟ್ ಮಂಡಿಸಲಿದ್ದಾರೆ ಎಂದು ಸರ್ಕಾರದ ಉನ್ನತ ಮೂಲಗಳು ತಿಳಿಸಿವೆ.

ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಜ.17ರಿಂದ ಫೆಬ್ರವರಿ 2ರವರೆಗೆ ಭಾನುವಾರ ಹೊರತುಪಡಿಸಿ 12 ದಿನಗಳ ಕಾಲ ಹಣಕಾಸು ಇಲಾಖೆ ಸೇರಿದಂತೆ ಎಲ್ಲ ಇಲಾಖೆಗಳು, ನಿಗಮ-ಮಂಡಳಿಗಳು, ಪ್ರಮುಖ ಸಂಘ-ಸಂಸ್ಥೆಗಳು, ರೈತ ಮುಖಂಡರು ಹಾಗೂ ಆರ್ಥಿಕ ತಜ್ಞರ ಜತೆ ಸರಣಿ ಸಮಾಲೋಚನಾ ಸಭೆಗಳನ್ನು ನಡೆಸಲಿದ್ದಾರೆ.

ಮುಂಬರುವ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಈ ಬಾರಿಯ ಬಜೆಟ್ ಜನಪ್ರಿಯ ಬಜೆಟ್ ಆಗುವ ನಿರೀಕ್ಷೆ ಇದ್ದು, ಈ ಹಿನ್ನೆಲೆಯಲ್ಲಿ ಎಲ್ಲ ವಲಯಗಳ ಬೇಕು-ಬೇಡಿಕೆಗಳನ್ನು ಸಿಎಂ ಆಲಿಸಲಿದ್ದಾರೆ. ಇದೇ ವೇಳೆ ನ್ಯಾ.ಸದಾಶಿವ ಆಯೋಗದ ವರದಿಯ ಶಿಫಾರಸುಗಳ ಜಾರಿ, ಜಾತಿ ಸಮೀಕ್ಷೆಯನ್ನು ಪ್ರಕಟಿಸುವುದರಿಂದ ಆಗುವ ಸಾಧಕ- ಬಾಧಕಗಳು ಹಾಗೂ ರಾಜ್ಯ ಸರ್ಕಾರಿ ನೌಕರರ ಆರನೇ ವೇತನ ಆಯೋಗದ ಜಾರಿ ಕುರಿತಂತೆಯೂ ಮಹತ್ವದ ಚರ್ಚೆ ನಡೆಯಲಿದ್ದು, ನಿರಂತರ ಸಭೆಗಳನ್ನು ನಡೆಸಲಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮಂಡ್ಯದಲ್ಲಿ ಸೆಮಿಕಂಡಕ್ಟರ್ ಘಟಕಕ್ಕೆ ಜಾಗ ಕೊಡಿ: ಸಿಎಂ ಸಿದ್ದರಾಮಯ್ಯಗೆ ಎಚ್‌ಡಿಕೆ ಪತ್ರ
ಸಂಕ್ರಮಣ ನಂತ್ರ ಸಿಎಂ ಬದಲು ಆಗ್ತಾರೆ, ಆಗಲ್ಲ ಎರಡೂ ಇದೆ: ಸಚಿವ ಸತೀಶ್‌ ಜಾರಕಿಹೊಳಿ