
ಬೆಂಗಳೂರು (ಫೆ.09): ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಖಡಕ್ ಎಚ್ಚರಿಕೆ ನೀಡಿದೆ. ಇನ್ಮುಂದೆ ಹೆಂಡತಿ, ಮಕ್ಕಳ ಮೇಲೆ ದೌರ್ಜನ್ಯ ನಡೆಸಿದರೆ ಅಥವಾ ಕುಟುಂಬವನ್ನು ನಿರ್ಲಕ್ಷಿಸಿದರೆ ಅಂತಹವರ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುತ್ತದೆ ಎಂದು ಸುತ್ತೋಲೆ ಹೊರಡಿಸಿದೆ. ಆ ಸುತ್ತೋಲೆ ಪ್ರತಿ ಸುವರ್ಣನ್ಯೂಸ್ಗೆ ಲಭ್ಯವಾಗಿದೆ.
ಸರ್ಕಾರಿ ನೌಕರರು ಹೆಂಡತಿ, ಮಕ್ಕಳ ಮೇಲೆ ದೌರ್ಜನ್ಯ ನಡೆಸುವಂತಿಲ್ಲ. ತನ್ನ ಕುಟುಂಬಗಳನ್ನು ನಿರ್ಲಕ್ಷಿಸುವಂತಿಲ್ಲ. ಕೇವಲ ವೃತ್ತಿಯಲ್ಲಿ ಮಾತ್ರ ಶಿಸ್ತಿನಿಂದ ಇದ್ದರೆ ಸಾಲದು. ಕುಟುಂಬದ ಸದಸ್ಯರನ್ನೂ ಗೌರವದಿಂದ ನಡೆಸಿಕೊಳ್ಳಬೇಕು. ಹೆಂಡತಿ, ಮಕ್ಕಳನ್ನು ಚೆನ್ನಾಗಿ ನೋಡಿಕೊಳ್ಳಬೇಕು.ತಂದೆ-ತಾಯಿ ಜೊತೆಯೂ ಗೌರವದಿಂದ ನಡೆದುಕೊಳ್ಳಬೇಕು. ಇಲ್ಲದಿದ್ದರೆ ಅಂತಹ ಸರ್ಕಾರಿ ನೌಕರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಸರ್ಕಾರದಿಂದ ಖಡಕ್ ಎಚ್ಚರಿಕೆ ನೀಡಿದೆ.
ಕುಟುಂಬ ನಿರ್ಲಕ್ಷದ ಬಗ್ಗೆ ನೌಕರರ ಕುಟುಂಬಗಳಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ
ಸರ್ಕಾರದ ಅಧೀನ ಕಾರ್ಯದರ್ಶಿಯಿಂದ ಸುತ್ತೋಲೆ ಹೊರಡಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.